ಮಲ್ಪೆ/ಶಿರ್ವ: ಅನಾರೋಗ್ಯದಿಂದ ಅಸ್ವಸ್ಥಗೊಂಡು ಇಬ್ಬರು ಮೃತ್ಯು
ಮಲ್ಪೆ/ಶಿರ್ವ: ಎ.16 (ಉಡುಪಿ ಟೈಮ್ಸ್ ವರದಿ): ಅನಾರೋಗ್ಯದಿಂದ ಅಸ್ವಸ್ಥಗೊಂಡು ಇಬ್ಬರು ಮೃತಪಟ್ಟಿರುವ ಘಟನೆ ಮಲ್ಪೆ ಹಾಗೂ ಶಿರ್ವ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮಲ್ಪೆ ಠಾಣಾ ವ್ಯಾಪ್ತಿಯ ಜಾನಕಿ (70) ಹಾಗೂ ಶಿರ್ವ ಠಾಣಾ ವ್ಯಾಪ್ತಿಯ ನಿತ್ಯಾನಂದ (62) ಮೃತಪಟ್ಟವರು.
ಮಲ್ಪೆವಯೋ ಠಾಣಾ ವ್ಯಾಪ್ತಿಯಲ್ಲಿ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಜಾನಕಿ ಅವರು ನಿನ್ನೆ ಮಧ್ಯಾಹ್ನದ ವೇಳೆ ತೀವ್ರ ಅಸ್ವಸ್ಥಗೊಂಡಿದ್ದರು. ತಕ್ಷಣ ಅವರನ್ನು ಉಡುಪಿ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಬಂದಾಗ ಪರೀಕ್ಷಿಸಿದ ವೈದ್ಯರು ಜಾನಕಿ ಅವರು ಮತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮತ್ತೊಂದೆಡೆ ಶಿರ್ವ ಠಾಣಾ ವ್ಯಾಪ್ತಿಯಲ್ಲಿ ಹೃದಯ ಸಂಬಂದಿ ಖಾಯಿಲೆಯಿಂದ ಬಳಲುತ್ತಿದ್ದ ನಿತ್ಯಾನಂದ (62) ರವರು, ಈ ಬಗ್ಗೆ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇವರು ನಿನ್ನೆ ಸಂಜೆ ವೇಳೆ ಮನೆಯಿಂದ ವಾಕ್ ಮಾಡಲು ಶಿರ್ವಾ ಪದವು ಶಾಲೆಯ ಬಳಿ ಹೋಗಿದ್ದಾಗ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದರು. ತಕ್ಷಣ ಅವರನ್ನು ಉಡುಪಿ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋದಾಗ ಅಲ್ಲಿ ಪರೀಕ್ಷಿಸಿದ ವೈದ್ಯರು ನಿತ್ಯಾನಂದ ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಶಿರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.