ಉಡುಪಿ: ಜಿಲ್ಲಾ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖಾ ನೌಕರರ ಸಂಘದ ಅಧ್ಯಕ್ಷರಾಗಿ ಯು.ಆನಂದ ಜತ್ತನ್ನ ಆಯ್ಕೆ

ಉಡುಪಿ ಎ.16(ಉಡುಪಿ ಟೈಮ್ಸ್ ವರದಿ): ಉಡುಪಿ ಜಿಲ್ಲಾ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖಾ ನೌಕರರ ಸಂಘದ ನೂತನ ಜಿಲ್ಲಾ ಅಧ್ಯಕ್ಷರಾಗಿ ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಛೇರಿಯ ಹಿರಿಯ ಫಾರ್ಮಸಿ ಅಧಿಕಾರಿ ಯು.ಆನಂದ ಜತ್ತನ್ನ ಅವರನ್ನು ಆಯ್ಕೆ ಮಾಡಲಾಗಿದೆ.

ಇತ್ತೀಚೆಗೆ ಉಡುಪಿ ತಾಲೂಕು ಆರೋಗ್ಯಾಧಿಕಾರಿಯವರ ಕಛೇರಿಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಆರೋಗ್ಯ ಇಲಾಖೆಯ ಎಲ್ಲಾ ವೃಂದ ಸಂಘಗಳ ಪದಾಧಿಕಾರಿಗಳ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಸಲಾಯಿತು. ಈ ಸಭೆಯಲ್ಲಿ ಉಡುಪಿ ಜಿಲ್ಲಾ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖಾ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಮಣಿಪುರದ ಪ್ರಾಥಮಿಕ ಆರೋಗ್ಯ ಕೇಂದ್ರದ ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ವಿಮಲ ಬಾಯರಿ, ಗೌರವಾಧ್ಯಕ್ಷರಾಗಿ ನಿಟ್ಟೆಯ ಸಮುದಾಯ ಆರೋಗ್ಯ ಕೇಂದ್ರದ ಶುಶ್ರೂಷಾಧಿಕಾರಿ ಬಾಲಕೃಷ್ಣ. ಎನ್., ಹಾಗೂ ಕೋಶಾಧಿಕಾರಿಯಾಗಿ ಉಡುಪಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ಕಛೇರಿ ಕಿರಿಯ ಪ್ರಯೋಗ ಶಾಲಾ ತಾಂತ್ರಿಕ ಅಧಿಕಾರಿ ದೇವದಾಸ್ ಕಾಮತ್ ಹಾಗೂ ಎಲ್ಲಾ ವೃಂದ ಸಂಘಗಳ ಅಧ್ಯಕ್ಷರು ಕಾರ್ಯದರ್ಶಿ ಕೋಶಾಧಿಕಾರಿ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

Leave a Reply

Your email address will not be published. Required fields are marked *

error: Content is protected !!