ಕಾರ್ಕಳ: ಅನಾರೋಗ್ಯದಿಂದ ಅಸ್ವಸ್ಥಗೊಂಡು ಇಬ್ಬರು ಮೃತ್ಯು

ಕಾರ್ಕಳ ಏ.22(ಉಡುಪಿ ಟೈಮ್ಸ್ ವರದಿ): ಅನಾರೋಗ್ಯದಿಂದ ಅಸ್ವಸ್ಥಗೊಂಡು ಇಬ್ಬರು ವ್ಯಕ್ತಿಗಳು ಮೃತಪಟ್ಟ ಘಟನೆ ಕಾರ್ಕಳ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕಾರ್ಕಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ರವಿ (40), ರಘುರಾಮ (60) ಮೃತಪಟ್ಟವರು. 

ಕೂಲಿ ಕೆಲಸ ಮಾಡಿಕೊಂಡಿದ್ದ  ರವಿ (40) ಇವರು ವಿಪರೀತ ಮದ್ಯಪಾನ ಮಾಡುವ ಅಭ್ಯಾಸ ಹೊಂದಿದ್ದರು. ಹಾಗೂ ಅನಾರೋಗ್ಯದಿಂದ ಬಳಲುತ್ತಿದ್ದರು. ಏ.21 ರಂದು ಬೆಳಿಗ್ಗೆ ತಮ್ಮ ಮನೆಯಲ್ಲಿ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದರು. ತಕ್ಷಣ  ಅವರನ್ನು ಚಿಕಿತ್ಸೆಗಾಗಿ ಕಾರ್ಕಳದ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದಾಗ ಪರೀಕ್ಷಿಸಿದ ವೈದ್ಯರು ರವಿ ಇವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಹಲವಾರು ವರ್ಷಗಳಿಂದ ಮುಂಬಾಯಿಯಲ್ಲಿ ಹೊಟೇಲ್‌ನಲ್ಲಿ ಕೆಲಸಮಾಡಿಕೊಂಡಿದ್ದ ರಘುರಾಮ (60) ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಇವರು ಸುಮಾರು 2 ತಿಂಗಳುಗಳಿಂದ ಕಾರ್ಕಳದ ಬೆಳ್ಮಣ್ ಗ್ರಾಮದ ಆಯೆರೆ ನಿವಾಸಿ ವಿದೇಶದಲ್ಲಿ ವಾಸವಾಗಿರುವ ಜಯಂತಿ ಆರ್. ಇವರ ಮನೆಯಲ್ಲಿ ಒಬ್ಬಂಟಿಯಾಗಿ ವಾಸವಾಗಿದ್ದರು. ಇವರು ತಮಗಿದ್ದ ಅನಾರೋಗ್ಯದಿಂದ ಅಸ್ವಸ್ಥಗೊಂಡು ಮೃತಪಟ್ಟಿದ್ದು. ಈ ಎರಡೂ ಘಟನೆಗೆ ಸಂಬಂಧಿಸಿ  ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!