ಕಾಪು: 10ನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

ಕಾಪು ಏ.23(ಉಡುಪಿ ಟೈಮ್ಸ್ ವರದಿ): ಬೆಳಪು ಸ್ಪೋರ್ಟ್ಸ್ ಕ್ಲಬ್ ಇದರ 30ನೇ ವರ್ಷದ ಸಂಭ್ರಮದ ಅಂಗವಾಗಿ 2024ನೇ ಸಾಲಿನ ಸಾಮಾಜಿಕ ಕಾರ್ಯ ಚಟುವಟಿಕೆಯ ಬಾಗವಾಗಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮವನ್ನು ಕಳತ್ತೂರು ಪಿ. ಕೆ. ಎಸ್. ಪ್ರೌಢಶಾಲೆಯ ಪ್ರಾಂಶುಪಾಲರಾದ ಶ್ರೀ. ಗಂಗನಯಕ್ ಅವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಬೆಳಪು ಸ್ಪೋರ್ಟ್ಸ್ ಕ್ಲಬ್ ನಿರಂತರವಾಗಿ ಸಾಮಾಜಿಕ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಸೇವೆ ನೀಡುತ್ತಾ ಬಂದಿದೆ. ವಿದ್ಯಾರ್ಥಿಗಳಿಗೆ ಇಂತಹ ಕಾರ್ಯಕ್ರಮಗಳ ತುಂಬ ಅಗತ್ಯವಿದೆ, ಪ್ರತಿ ವರ್ಷವು ಕೂಡ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಬೇಕಾಗಿ ವಿನಂತಿಸಿದರು.

ಪಿ. ಕೆ. ಎಸ್. ಪ್ರೌಢಶಾಲೆ ಕಳತ್ತೂರು, ಮೌಲಾನ ಅಝದ್ ಮಾಡೆಲ್ ಪ್ರೌಢಶಾಲೆ ಮಲ್ಲಾರು, ಸರ್ಕಾರಿ ಸಂಯುಕ್ತ ಪ್ರೌಢಶಾಲೆ ಮಲ್ಲಾರು ಹಾಗೂ ಬೆಳಪು ಸರ್ಕಾರಿ ಸಂಯುಕ್ತ ಪ್ರೌಢಶಾಲೆಯ ವಿದ್ಯಾರ್ಥಿಗಳು ಉಚಿತ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮದಲ್ಲಿ  ಪಾಲ್ಗೊಂಡಿದ್ದರು.

ಶ್ರೀ. ಖಲೀಲ್ ಅಹಮ್ಮದ್  (ಲೈಫ್ & ಕರಿಯರ್ ಕೋಚ್ – ಇನ್ಸೖಟ್ ಕರಿಯರ್ ಅಕಾಡೆಮಿ, ಉಡುಪಿ) ಇವರು ವೃತ್ತಿ ಮಾರ್ಗದರ್ಶಕರಾಗಿ ಕಾರ್ಯಕ್ರಮವನ್ನು ನೆರವೇರಿಸಿದರು. 

ಬೆಳಪು ಸ್ಪೋರ್ಟ್ಸ್ ಕ್ಲಬ್ ನ ಅಧ್ಯಕ್ಷರಾದ ಶಾನಾವಾಝ್ ಫಝಲುದ್ದೀನ್ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷ ಶಾಹೀದ್‌ ನವಾಜ್‌, ಕಾರ್ಯದರ್ಶಿ ರಿಯಾನ್‌ ಅನ್ಸಾರ್‌, ಜೊತೆ ಕಾರ್ಯದರ್ಶಿ ಸಕ್ಲೆನ್ ಅಹಮ್ಮದ್, ಸದಸ್ಯರಾದ ಶಮೀಮ್ ಖುಷ್ದಿಲ್, ನದಿಮ್ ಖುಷ್ದಿಲ್, ಯಸಿರ್ ಅಲಿ, ಮುಪೀದ್ ಹನೀಫ್ ಹಾಗೂ ಬೆಳಪು ಸ್ಪೋರ್ಟ್ಸ್ ಕ್ಲಬ್ ನ ಹಿರಿಯ ಸದಸ್ಯರುಗಳಾದ ಶಾನವಾಜ್‌ ನುರುಲ್ಲಾ, ಶೇಖ್ ಖಾಲಿದ್ ಅಹ್ಮದ್, ಇರ್ಫಾನ್ ರಫೀಕ್, ಅಸ್ಲಂ ನಸ್ರೊಲ್ಲಾ, ಸಹೀದ್‌ ಅಹ್ಮದ್, ಅಕ್ರಮ್‌ ಮಹತಾಬ್‌ ಮತ್ತು ಅಲ್ತಾಫ್ ಅಬ್ದುಲ್ ಘನಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!