ಕೊಲ್ಲೂರು: ಅಕ್ರಮ ಮದ್ಯ ಮಾರಾಟ-ಓರ್ವ ವಶ

ಕೊಲ್ಲೂರು ಏ.24 (ಉಡುಪಿ ಟೈಮ್ಸ್ ವರದಿ): ಜಡ್ಕಲ್ ಗ್ರಾಮದ ಹಾಲ್ಕಲ್ ಜಂಕ್ಷನ್ ಬಳಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಹೋಟೇಲ್‍ವೊಂದಕ್ಕೆ ದಾಳಿ ಮಾಡಿದ ಪೊಲೀಸರು ಓರ್ವನನ್ನು ಒಶಕ್ಕೆ ಪಡೆದುಕೊಂಡಿದ್ದಾರೆ.

ಈ ಬಗ್ಗೆ ಖಚಿತ ಮಾಹಿತಿ ಪಡೆದ ಕೊಲ್ಲೂರು ಠಾಣಾ ಪೊಲೀಸರು ಜಡ್ಕಲ್ ಗ್ರಾಮದ ಹಾಲ್ಕಲ್ ಜಂಕ್ಷನ್ ಬಳಿಯ ಹೋಟೆಲ್‍ಗೆ ದಾಳಿ ಮಾಡಿ ಸ್ಥಳದಲ್ಲಿ ಇದ್ದ ಉಪ್ಪುಂದದ ಸುಬ್ರಹ್ಮಣ್ಯ (42) ಎಂಬ ವ್ಯಕ್ತಿಯನ್ನು ವಶಕ್ಕೆ ಪಡೆದು, ಅಕ್ರಮವಾಗಿ ದಾಸ್ತಾನು ಇರಿಸಿದ್ದ 7,480 ರೂ. ಮೌಲ್ಯದ 16.83 ಲೀಟರ್ ಮದ್ಯವನ್ನು ಹಾಗೂ ಮದ್ಯ ಮಾರಾಟ ಮಾಡಿ ಸಂಗ್ರಹಿಸಿದ ಒಟ್ಟು 800 ರೂ. ನಗದನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!