ಕಾರ್ಕಳ: ಅನಾರೋಗ್ಯದ ಕಾರಣ-ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ
ಕಾರ್ಕಳ ಏ.29 (ಉಡುಪಿ ಟೈಮ್ಸ್ ವರದಿ): ಅನಾರೋಗ್ಯದ ಕಾರಣ ಮನನೊಂದು ವ್ಯಕ್ತಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಠಾಣಾ ವ್ಯಾಪ್ತಿಯ ನಿವಾಸಿ ದರ್ಣಪ್ಪ (61) ಆತ್ಮಹತ್ಯೆ ಮಾಡಿಕೊಂಡವರು. ಸುಮಾರು 2 ವರ್ಷಗಳ ಹಿಂದೆ ರಸ್ತೆ ಅಪಘಾತದಿಂದ ದರ್ಣಪ್ಪ ಅವರ ಎಡಗೈಗೆ ಉಂಟಾದ ಗಾಯದ ನೋವು ಆಗಾಗ ಬರುತ್ತಿರುವುದರಿಂದ ಕೆಲಸ ಮಾಡಲು ಕಷ್ಟವಾಗುತ್ತಿತ್ತು. ಇದರಿಂದ ಮನನೊಂದು ಜೀವನದಲ್ಲಿ ಜಿಗುಪ್ಸೆಗೊಂಡು ಏ.24 ರಂದು ಸಂಜೆ ವೇಳೆ ಕೀಟನಾಶಕವನ್ನು ಕುಡಿದು ಅಸ್ವಸ್ಥಗೊಂಡಿದ್ದರು. ಈ ವೇಳೆ ಅವರನ್ನು ಚಿಕಿತ್ಸೆಗಾಗಿ ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಚಿಕಿತ್ಸೆ ಸ್ಪಂದಿಸದೇ ನಿನ್ನೆ ಬೆಳಿಗ್ಗೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂಬುದಾಗಿ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.