ಕುಂದಾಪುರ: ಶ್ರೀ ಯಕ್ಷೇಶ್ವರಿ ದೇವಸ್ಥಾನದಲ್ಲಿ ಕಳ್ಳತನ
ಕುಂದಾಪುರ ಮೇ 06 (ಉಡುಪಿ ಟೈಮ್ಸ್ ವರದಿ): ವಡೇರಹೋಬಳಿ ಗ್ರಾಮದ ಶ್ರೀ ಯಕ್ಷೇಶ್ವರಿ ದೇವಸ್ಥಾನದಲ್ಲಿ ಅಪಾರ ಮೌಲ್ಯದ ಪೂಜಾ ಸಾಮಾಗ್ರಿಗಳ ಕಳ್ಳತನ ನಡೆದಿದೆ.
ಮೇ 2 ರಂದು ದೇವಸ್ಥಾನದ ಅರ್ಚಕರು ಪೂಜೆ ಮುಗಿಸಿ ದೇವಸ್ಥಾನಕ್ಕೆ ಚಿಲಕವನ್ನು ಹಾಕಿ ಹೋಗಿದ್ದರು. ಬಳಿಕ ಮಧ್ಯಾಹ್ನದ ವೇಳೆ ಕಾರ್ಯದರ್ಶಿಯಾದ ಸಂತೋಷ ಅವರು ದೇವಸ್ಥಾನಕ್ಕೆ ಹೋಗಿ ನೋಡಿದಾಗ ದೇವಸ್ಥಾನದಲ್ಲಿ ಕಾಣಿಕೆ ಹುಂಡಿ ಇಲ್ಲದಿರುವುದು ಗಮನಕ್ಕೆ ಬಂದಿದೆ. ಬಳಿಕ ಪರಿಶೀಲಿಸಿದಾಗ ಕಾಣಿಕೆ ಹುಂಡಿಯಲ್ಲಿದ್ದ ಅಂದಾಜು 15,000/-ರೂ ನಗದು ಹಣದ ಜೊತೆಗೆ ಒಟ್ಟು 30000/- ರೂ. ಮೌಲ್ಯದ ಪೂಜಾ ಸಾಮಾಗ್ರಿಗಳು ಕಳವಾಗಿರುವುದು ಗಮನಕ್ಕೆ ಬಂದಿದೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.