ವಾಯುಭಾರ ಕುಸಿತ ಕರಾವಳಿಯಲ್ಲಿ ಮತ್ತೆ ರೆಡ್ ಅಲರ್ಟ್ ಘೋಷಣೆ
ಉಡುಪಿ (ಉಡುಪಿ ಟೈಮ್ಸ್ ವರದಿ); ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಕರಾವಳಿ ಮತ್ತು ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.
ಅ 12 ಹಾಗು 13 ರಂದು ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ..
ಗಾಳಿಯು ಪಶ್ಚಿಮ ದಿಕ್ಕಿನ ಕಡೆಗೆ ಅಂದರೆ ಅಂಡಮಾನ್ ಭಾಗದಿಂದ ಉತ್ತರ ಆಂಧ್ರಪ್ರದೇಶದ ಕರಾವಳಿಯನ್ನು ಅ.12ರಂದು ದಾಟುವ ನಿರೀಕ್ಷೆ ಇದೆ ಎಂದು ತಿಳಿಸಿದ್ದಾರೆ.
During the difficult time of sevier spreading of Covid 19, Red alert should be carefully managed by the government, District administration and all the departments concerned.