ಮಲ್ಪೆ: ಆಕಸ್ಮಿಕವಾಗಿ ಸಮುದ್ರದ ನೀರಿಗೆ ಬಿದ್ದು ಮೀನುಗಾರ ಮೃತ್ಯು

ಮಲ್ಪೆ ಮೇ 8(ಉಡುಪಿ ಟೈಮ್ಸ್ ವರದಿ): ಮೀನುಗಾರಿಕೆ ನಡೆಸುತ್ತಿದ್ದಾಗ ಆಕಸ್ಮಿಕವಾಗಿ ಸಮುದ್ರದ ನೀರಿಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಅರಬ್ಬಿ ಸಮುದ್ರದಲ್ಲಿ ನಡೆದಿದೆ. 

ರಾಘವೇಂದ್ರ(45) ಮೃತಪಟ್ಟವರು. ಇವರು ನಿನ್ನೆ ರಾತ್ರಿ ಮೀನುಗಾರಿಕೆ ನಡೆಸುವ ಸಲುವಾಗಿ ಇತರರೊಂದಿಗೆ ಹೊರಟಿದ್ದರು. ಈ ವೇಳೆ ಸುಮಾರು 10 ಮಾರು ದೂರ ಅರಬ್ಬಿ ಸಮುದ್ರದಲ್ಲಿ  ರಾತ್ರಿ 10:30 ರ ಸುಮಾರಿಗೆ ಮೀನುಗಾರಿಕೆಗೆ ಬಲೆ ಬಿಡುತ್ತಿರುವಾಗ ಸಮುದ್ರದ ಅಬ್ಬರದ ಅಲೆಗೆ ಬೋಟು ಅಲುಗಾಡಿದ ಪರಿಣಾಮ ರಾಘವೇಂದ್ರ ಅವರು ಸಮುದ್ರದ ನೀರಿಗೆ ಬಿದ್ದು ಅಸ್ವಸ್ಥಗೊಂಡಿದ್ದರು. ತಕ್ಷಣ ಅವರನ್ನು ಇತರ ಮೀನುಗಾರರು ಮೇಲಕ್ಕೆ ಎತ್ತಿ ಉಪಚರಿಸಿ ಮಲ್ಪೆ ಬಂದರಿಗೆ ಬಂದು ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದಾಗ ಆಸ್ಪತ್ರೆಯಲ್ಲಿ ಪರೀಕ್ಷಿಸಿದ ವೈಧ್ಯರು ಈಗಾಗಲೇ ಮೃತ ಪಟ್ಟಿರುವುದಾಗಿ ತಿಳಿಸಿರುತ್ತಾರೆ. ಈ ಬಗ್ಗೆ ಮಲ್ಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!