ಹಿರಿಯಡ್ಕ / ಶಂಕರನಾರಾಯಣ: ಅನಾರೋಗ್ಯದಿಂದ ಮಹಿಳೆಯರಿಬ್ಬರು ಮೃತ್ಯು

ಹಿರಿಯಡ್ಕ / ಶಂಕರನಾರಾಯಣ ಮೇ 8(ಉಡುಪಿ ಟೈಮ್ಸ್ ವರದಿ) : ಅನಾರೋಗ್ಯದಿಂದ ಅಸ್ವಸ್ಥಗೊಂಡು ಮಹಿಳೆಯರಿಬ್ಬರು ಮೃತಪಟ್ಟ ಘಟನೆ ಹಿರಿಯಡ್ಕ ಹಾಗೂ ಶಂಕರನಾರಾಯಣ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಹಿರಿಯಡ್ಕ ಠಾಣಾ ವ್ಯಾಪ್ತಿಯ ಅಕ್ಕಣ್ಣಿ (80), ಶಂಕರನಾರಾಯಣ ಠಾಣಾ ವ್ಯಾಪ್ತಿಯ ಸವಿತಾ (35) ಮೃತಪಟ್ಟವರು. 

ಅನಾರೋಗ್ಯದಿಂದ ಬಳಲುತ್ತಿದ್ದ ಅಕ್ಕಣ್ಣಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗಿನ ಜಾವ ಮೃತಪಟ್ಟಿದ್ದಾರೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇಂದು ಬೆಳಗಿನ ಜಾವ ಅನಾರೋಗ್ಯದಿಂದ ಅಸ್ವಸ್ಥಗೊಂಡು ಕುಸಿದು ಬಿದ್ದ  ಸವೀತಾ ಅವರನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸಲು ಕರೆದುಕೊಂಡು ಹೋದಾಗ ಪರೀಕ್ಷಿಸಿದ ವೈದ್ಯರು ಸವಿತಾ ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.  ಈ ಬಗ್ಗೆ ಶಂಕರನಾರಾಯಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!