ಮಣಿಪಾಲ: ಗಾಂಜಾ ಸೇವನೆ- ಇಬ್ಬರು ವಶ

ಮಣಿಪಾಲ ಮೇ 15 (ಉಡುಪಿ ಟೈಮ್ಸ್ ವರದಿ): ಗಾಂಜಾ ಸೇವನೆ ಪ್ರಕರಣಕ್ಕೆ ಸಂಬಂಧಿಸಿ ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿ ಇಬ್ಬರು ಯುವಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಮಣಿಪಾಲ ಠಾಣಾ ಪೊಲೀಸರು ಮೇ 14 ರಂದು ರೌಂಡ್ಸ್ ಕರ್ತವ್ಯದಲ್ಲಿ ಇರುವಾಗ ಶಿವಳ್ಳಿ ಗ್ರಾಮದ ಮಣಿಪಾಲ ವಿದ್ಯಾರತ್ನ ನಗರದ ಸಾರ್ವಜನಿಕ ಸ್ಥಳದಲ್ಲಿ ಅಮಲಿನಲ್ಲಿ ಇದ್ದಂತೆ ಕಂಡುಬಂದ ಆದಿತ್ಯ ವಿಕ್ರಮ್‌ (20),  ದ್ರಶ್ಯ (21) ಎಂಬ ಇಬ್ಬರನ್ನು ಮಾದಕ ವಸ್ತು ಸೇವಿಸಿರುವ ಅನುಮಾನದ ಮೇರೆಗೆ ವಶಕ್ಕೆ ಪಡೆದು ಮಣಿಪಾಲದ ಫಾರೆನ್ಸಿಕ್ ವಿಭಾಗದ ವೈದ್ಯರ ಬಳಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದರು. ಈ ಇಬ್ಬರ ವೈದ್ಯಕೀಯ ಪರೀಕ್ಷಾ ವರದಿಯಲ್ಲಿ ಗಾಂಜಾ ಸೇವಿಸಿರುವುದು ದೃಢ ಪಟ್ಟ ಕಾರಣ ಇಬ್ಬರ ವಿರುದ್ಧ ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!