ಮಂಗಳೂರು: ಕೋವಿಡ್ ಕರ್ಫ್ಯೂ ನಿಯಮ ಉಲ್ಲಂಘಿಸಿ ಆರತಕ್ಷತೆ, ಆಯೋಜಕರು ಮತ್ತು ಬೀಚ್ ಮಾಲೀಕರ ವಿರುದ್ಧ ಪ್ರಕರಣ ದಾಖಲು
ಮಂಗಳೂರು ಮೇ.5 (ಉಡುಪಿ ಟೈಮ್ಸ್ ವರದಿ) : ಕುಳಾಯಿಯ ಶೋರ್ ಬೀಚ್ ಹೌಸ್ನಲ್ಲಿ ಕೋವಿಡ್ ಕರ್ಫ್ಯೂ ನಿಯಮ ಉಲ್ಲಂಘಿಸಿ ನಡೆದ ಮದುವೆ ಆರತಕ್ಷತೆ ಕಾರ್ಯಕ್ರಮ ಕ್ಕೆ ಸಂಬಂಧಿಸಿ ಆಯೋಜಕರು ಮತ್ತು ಬೀಚ್ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಇಲ್ಲಿ ನಿಯಮ ಉಲ್ಲಂಘಿಸಿ ಕಾರ್ಯಕ್ರಮ ನಡೆಯುತ್ತಿದ್ದ ಬಗ್ಗೆ ಸ್ಥಳೀಯರು ನೀಡಿದ ದೂರಿನ ಮೇರೆಗೆ ಮಂಗಳೂರು ಉಪವಿಭಾಗಾಧಿಕಾರಿ ಮದನ್ ಮೋಹನ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದರು. ಈ ವೇಳೆ ಅನುಮತಿಯ ನಿಬಂಧನೆಗಳನ್ನು ಉಲ್ಲಂಘನೆ ಮಾಡಿರುವುದು ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಮದುವೆ ಆಯೋಜಕರು ಮತ್ತು ಬೀಚ್ ಹೌಸ್ ಮಾಲೀಕರ ವಿರುದ್ಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಮಂಗಳೂರಿನ ಕುಳಾಯಿ ಶೋರ್ ಬೀಚ್ ಹೌಸ್ನಲ್ಲಿ ನಿನ್ನೆ ರಾತ್ರಿ ಮದುವೆ ಆರತಕ್ಷತೆ ಕಾರ್ಯಕ್ರಮ ನಡೆದಿತ್ತು. ಕಾರ್ಯಕ್ರಮ ಸಂಬಂಧ ಮಹಾನಗರ ಪಾಲಿಕೆ ವತಿಯಿಂದ ಅನುಮತಿಯನ್ನು ಪಡೆಯಲಾಗಿತ್ತು. ಆದರೆ, ಅನುಮತಿ ಪಡೆದದ್ದಕ್ಕಿಂತ ಹೆಚ್ಚಿನ ಜನರು ಕಾರ್ಯಕ್ರಮದಲ್ಲಿ ಸೇರಿದ್ದದರು ಎಂದು ತಿಳಿದು ಬಂದಿದೆ