ಬ್ರಹ್ಮಾವರ: 2.45 ಲ.ರೂ ಮೌಲ್ಯದ ಚಿನ್ನಾಭರಣ ಕಳವು

ಬ್ರಹ್ಮಾವರ ಮೇ 15(ಉಡುಪಿ ಟೈಮ್ಸ್ ವರದಿ): ಚಾಂತಾರು ಗ್ರಾಮದಲ್ಲಿ ಮನೆಯೊಂದಕ್ಕೆ ನುಗ್ಗಿದ ಕಳ್ಳರು 2.45 ಲ.ರೂ ಮೌಲ್ಯದ ಚಿನ್ನಾಭರಣಗಳನ್ನು ಕಳವು ಗೈದಿದ್ದಾರೆ.

ಚಾಂತಾರು ಗ್ರಾಮದ ವಿಜಯ ಎಂಬವರ ಮನೆಯಲ್ಲಿ ಕಳ್ಳತನ ನಡೆದಿದೆ. ಇಂದು ಬೆಳಿಗ್ಗಿನ ಅವಧಿಯಲ್ಲಿ ಮನೆಯ ಬೀಗ ಮುರಿದು ಒಳ ನುಗ್ಗಿದ ಕಳ್ಳರು ಕೋಣೆಯಲ್ಲಿ ಇದ್ದ ಗೊಡ್ರೇಜ್‌ ಬೀಗ ಮುರಿದು ಅದರ ಒಳಗೆ ಇಟ್ಟಿದ್ದ ಒಟ್ಟು ರೂ. 2,45,000/- ಮೌಲ್ಯದ 49 ಗ್ರಾಂ ಚಿನ್ನಾಭರಣಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದಾರೆ ಎಂಬುದಾಗಿ ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!