ಶಿರೂರು: ಟಿಸಿ ನೀಡಲು ವಿಳಂಬ- ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ
ಮೇ 20: ವರ್ಗಾವಣೆ ಪ್ರಮಾಣ ಪತ್ರ ನೀಡಲು ವಿಳಂಬ ಮಾಡಿದ್ದಕ್ಕೆ ಮನನೊಂದು ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿರೂರು ಗ್ರಾಮದ ಮೇಲ್ಪಂಕ್ತಿ ಎಂಬಲ್ಲಿ ಇಂದು ನಡೆದಿದೆ.
ಬೈಂದೂರು ಸರಕಾರಿ ಪ್ರೌಢಶಾಲೆ ಹೈಸ್ಕೂಲ್ ವಿದ್ಯಾರ್ಥಿ ನಿತಿನ್ ಆಚಾರಿ (16) ಆತ್ಮಹತ್ಯೆ ಮಾಡಿಕೊಂಡಾತ. ಈತ ಪ್ರಸ್ತುತ ಸಾಲಿನಲ್ಲಿ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣನಾಗಿದ್ದು ಸೋಮವಾರ ಕಾಲೇಜಿಗೆ ವರ್ಗಾವಣೆ ಪ್ರಮಾಣ ಪತ್ರ ಪಡೆಯಲು ಹೋದಾಗ ಶಿಕ್ಷಕರು ಬೈದ್ದಿದ್ದಾರೆಎನ್ನುವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ