ಉಡುಪಿ: ಮೀನು ಸಾಗಾಟದ ಲಾರಿ – ಕಾರು ಮುಖಾಮುಖಿ ಡಿಕ್ಕಿ- ಪ್ರಯಾಣಿಕರಿಗೆ ಗಾಯ

ಉಡುಪಿ, ಮೇ.22 ಕಾರು ಮತ್ತು ಮೀನು ಸಾಗಾಟದ ಲಾರಿ ಮುಖಾಮುಖಿ ಡಿಕ್ಕಿಯಾದ ಘಟನೆ ಉಡುಪಿ ಅಂಬಲಪಾಡಿ ಬಳಿಯ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇಂದು ನಡೆದಿದೆ.

ಕೇರಳದ ಕಡೆಗೆ ಮೀನು ಸಾಗಿಸುತ್ತಿದ್ದ ಲಾರಿ ಸರ್ವಿಸ್ ರಸ್ತೆಯಿಂದ ರಾಷ್ಟ್ರೀಯ ಹೆದ್ದಾರಿಗೆ ಪ್ರವೇಶಿಸಿದ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸುವ ಪ್ರಯತ್ನದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಹತ್ತಿ ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಬಗ್ಗೆ ವಿಷಯ ತಿಳಿದ ಉಡುಪಿ ಸಂಚಾರಿ ಪೊಲೀಸರು ಸ್ಥಳಕ್ಕಾಗಮಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಇನ್ನು ಲಾರಿಯಲ್ಲಿ ಸಾಗಿಸಲಾಗುತ್ತಿದ್ದ ಮೀನುಗಳನ್ನು ಬೇರೆ ವಾಹನಕ್ಕೆ ಸ್ಥಳಾಂತರ ಮಾಡಲಾಯಿತು ಎಂದು ತಿಳಿದು ಬಂದಿದೆ

Leave a Reply

Your email address will not be published. Required fields are marked *

error: Content is protected !!