ಬೆಳ್ತಂಗಡಿ: ಶಾಸಕ ಹರೀಶ್ ಪೂಂಜಾಗೆ ಪೊಲೀಸ್ ನೋಟೀಸ್
ಬೆಳ್ತಂಗಡಿ ಮೇ 22 ; ಶಾಸಕ ಹರೀಶ್ ಪೂಂಜ ವಿರುದ್ಧ ಎರಡು ಪ್ರತ್ಯೇಕ
ಎಫ್ ಐ ಆರ್ ದಾಖಲಾದ ಹಿನ್ನೆಲೆ ಇಂದು ಪೋಲೀಸರು ಬೆಳ್ತಂಗಡಿಯ ಗರ್ಡಾಡಿಯಲ್ಲಿರುವ ಅವರ ನಿವಾಸಕ್ಕೆ ತೆರಳಿ ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಶಾಸಕ ಹರೀಶ್ ಪೂಂಜ ವಿರುದ್ಧ ಎರಡು ಪ್ರಕರಣಗಳಿಗೆ ಸಂಬಂಧಿಸಿ ಎಫ್.ಐ.ಆರ್ ದಾಖಲಾಗಿದ್ದು, ಪೊಲೀಸರು ನೀಡಿರುವ ನೋಟೀಸ್ ನಲ್ಲಿ ಬೆಳ್ತಂಗಡಿ ಪೊಲೀಸ್ ಠಾಣಾ ಅ.ಕ 58/2024 ಕಲಂ : 143,147,341,504,506 ಜೊತೆಗೆ 149 ಐಪಿಸಿ ಪ್ರಕರಣದಲ್ಲಿ ಆರೋಪಿತರಾಗಿದ್ದೀರಿ.ಈ ಪ್ರಕರಣದಲ್ಲಿ ವಿಚಾರಣೆಗೆ ಒಳಪಡಿಸಲು ಸಾಕಷ್ಟು ಸಾಕ್ಷ್ಯಾಧಾರ ಹಾಗೂ ಸನ್ನಿವೇಷಗಳು ಕಂಡು ಬಂದಿದ್ದು, ಈ ನೋಟೀಸು ಸ್ವೀಕರಿಸಿದ ಕೂಡಲೇ ಯಾವುದೇ ವಿಳಂಬವಿಲ್ಲದೇ ಪೊಲೀಸ್ ಠಾಣೆಗೆ ಬರಲು ಹಾಗೂ ವಿಚಾರಣೆಗೆ ಸಹಕರಿಸಲು ತಿಳಿಯಪಡಿಸಲಾಗಿದೆ ಎಂದು ಉಲ್ಲೇಖಿಸಲಾಗಿದೆ.