ಜೂ.15-16- ಬೆಂಗಳೂರಿನ ಅರಮನೆ ಮೈದಾನದಲ್ಲಿ ದಕ್ಷಿಣ ಭಾರತ ಉತ್ಸವ-2024

ಉಡುಪಿ ಮೇ 29(ಉಡುಪಿ ಟೈಮ್ಸ್ ವರದಿ): ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾ ಸಂಸ್ಥೆ(ಎಫ್‍ಕೆಸಿಸಿಐ)ಯು ಕರ್ನಾಟಕ ಸರ್ಕಾರದ ಪ್ರವಾಸೋದ್ಯಮ ಇಲಾಖೆಯ ಸಹಯೋಗದೊಂದಿಗೆ ಜೂನ್ 15 ಮತ್ತು 16 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ದಕ್ಷಿಣ ಭಾರತ ಉತ್ಸವ- 2024 ನ್ನು ಆಯೋಜಿಸಲಾಗಿದೆ ಎಂದು ಎಫ್‍ಕೆಸಿಸಿಐನ ಉಪಾಧ್ಯಕ್ಷ ಎಂ.ಜಿ ಬಾಲಕೃಷ್ಣ ಅವರು ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ಈ ಕಾರ್ಯಕ್ರಮವು ಪ್ರವಾಸೋದ್ಯಮ ಕ್ಷೇತ್ರದಲ್ಲಿ ಹೂಡಿಕೆಯ ಅವಕಾಶಗಳು ಮತ್ತು ಉದ್ಯೋಗ ಸೃಷ್ಟಿಗೆ ಪ್ರಾಮುಖ್ಯತೆ ನೀಡುವ ಮೂಲಕ ದಕ್ಷಿಣ ಭಾರತದ ರಾಜ್ಯಗಳ ಪ್ರವಾಸೋದ್ಯಮ ಸಾಮಥ್ರ್ಯವನ್ನು ಪ್ರದರ್ಶಿಸುವ ಗುರಿಯನ್ನು ಹೊಂದಿದೆ. ಕ್ರಿಯಾತ್ಮಕ ಪ್ರವಾಸೋದ್ಯಮ ಉದ್ಯಮದೊಳಗೆ ಪಾಲುದಾರರನ್ನು ತೊಡಗಿಸಿ ಕೊಳ್ಳಲು ಮತ್ತು ಸಬಲೀಕರಣಗೊಳಿಸಲು ಇದೊಂದು ಉತ್ತಮ ಕಾರ್ಯಕ್ರಮವಾಗಿದೆ ಎಂದು ತಿಳಿಸಿದರು.

ಪ್ರವಾಸೋದ್ಯಮ ಹೂಡಿಕೆದಾರರ ಸಭೆ, ದಕ್ಷಿಣ ರಾಜ್ಯಗಳ ಶ್ರೀಮಂತ ಸಂಸ್ಕøತಿ, ಪಾಕಪದ್ಧತಿ ಮತ್ತು ಪ್ರವಾಸೋದ್ಯಮ ಕೊಡುಗೆಗಳನ್ನು ವಿಶ್ಲೇಷಿಸಿ ತೋರಿಸುವ ಪ್ರದರ್ಶನ, ಸಮ್ಮೇಳನಗಳು ಮತ್ತು ಬಿ2ಬಿ, ಬಿ2ಜಿ ಮತ್ತು ಬಿ2ಸಿ ಅಮೂಲ್ಯವಾದ ಸರಣಿ ಸಂವಹನಗಳ ಮೂಲಕ ಅವಕಾಶಗಳು ಸೇರಿದಂತೆ ವೈವಿಧ್ಯಮಯ ಚಟುವಟಿಕೆಗಳನ್ನು ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.

ಉಡುಪಿಯಲ್ಲಿ ರೋಡ್ ಶೋ ಮೂಲಕ ದಕ್ಷಿಣ ಉಡುಪಿಯನ್ನು ಭಾರತದ ಪ್ರಮುಖ ಪ್ರವಾಸೋದ್ಯಮ ತಾಣವಾಗಿ ಗುರುತಿಸಲು ಮತ್ತು ಆಸಕ್ತ ಎಂಎಸ್‍ಎಂಇಗಳಿಗೆ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಹೂಡಿಕೆ ಮಾಡಲು ಆಹ್ವಾನವನ್ನು ನೀಡಲಾಯಿತು.

ಪ್ರವಾಸೋದ್ಯಮದ ಅಭಿವೃದ್ಧಿಗೆ ಇರುವ ಸವಾಲುಗಳನ್ನು ಎದುರಿಸುವ ಮೂಲಕ ಮತ್ತು ಕಾರ್ಯತಂತ್ರದ ಅಭಿವೃದ್ಧಿ ಉಪಕ್ರಮಗಳನ್ನು ಅನುಷ್ಠಾನಗೊಳಿಸುವ ಮೂಲಕ, ಕರ್ನಾಟಕವು ತನ್ನ ಕಡಲತೀರದ ಪ್ರವಾಸೋದ್ಯಮ ವಲಯವನ್ನು ಗಮನಾರ್ಹವಾಗಿ ಹೆಚ್ಚಿಸಬಹುದು. ಕೇರಳ ಮತ್ತು ಗೋವಾದ ಯಶಸ್ಸನ್ನು ಪುನರಾವರ್ತಿಸಬಹುದು ಮತ್ತು ರಾಜ್ಯದ ಆರ್ಥಿಕತೆಗೆ ಕೊಡುಗೆ ನೀಡಬಹುದು ಎಂದರು.

ಈ ಸಂದರ್ಭದಲ್ಲಿ ಎಫ್‍ಕೆಸಿಸಿಐನ ಎಫ್‍ಕೆಸಿಸಿಐನ ನಿರ್ದೇಶಕ ಎ. ದೇವಿ ಪ್ರಸಾದ್ ಶೆಟ್ಟಿ, ಪಿ.ಸಿ ರಾವ್, ನಾಗರಾಜ್ ಹೆಬ್ಬಾರ್, ಕರಾವಳಿ ಪ್ರವಾಸೋದ್ಯಮದ ಸಂಸ್ಥೆಯ ಅಧ್ಯಕ್ಷ ಮನೋಹರ್ ಎಸ್ ಶೆಟ್ಟಿ ಅವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!