ಹೆಬ್ರಿ: ನದಿ ನೀರಿಗೆ ಬಿದ್ದು ವ್ಯಕ್ತಿ ಮೃತ್ಯು
ಹೆಬ್ರಿ ಮೇ 31 (ಉಡುಪಿ ಟೈಮ್ಸ್ ವರದಿ): ನದಿಗೆ ಸ್ನಾನಕ್ಕೆ ಹೋದ ವ್ಯಕ್ತಿ ಆಕಸ್ಮಿಕವಾಗಿ ಕಾಲುಜಾರಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ಹೆಬ್ರಿಯ ಮುದ್ರಾಡಿ ಗ್ರಾಮದಲ್ಲಿ ನಡೆದಿದೆ.
ಸ್ಥಳೀಯ ನಿವಾಸಿ ಕರುಣಾಕರ (70) ಮೃತಪಟ್ಟವರು. ಇವರು ನಿನ್ನೆ ಬೆಳಿಗ್ಗೆ ಮನೆಯ ಸಮೀಪ ಹಾದು ಹೋಗುವ ನದಿಗೆ ಅಡ್ಡಲಾಗಿ ಮಣ್ಣು ಹಾಕಿ ನೀರು ನಿಲ್ಲಿಸಿರುವ ಸ್ಥಳಕ್ಕೆ ಸ್ನಾನ ಮಾಡಲು ಹೋದಾಗ ಕಾಲು ಜಾರಿ ನೀರಿಗೆ ಬಿದ್ದು ಮೃತಪಟ್ಟಿದ್ದಾರೆ ಎಂಬುದಾಗಿ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.