ಕಾಪು: ಗಾಂಜಾ ಸೇವನೆ-ವ್ಯಕ್ತಿ ವಿರುದ್ಧ ಪ್ರಕರಣ

ಕಾಪು ಜೂ.1 (ಉಡುಪಿ ಟೈಮ್ಸ್ ವರದಿ): ಗಾಂಜಾ ಸೇವನೆ ಪ್ರಕರಣಕ್ಕೆ ಸಂಬಂಧಿಸಿ ಓರ್ವ ವ್ಯಕ್ತಿಯ ವಿರುದ್ಧ ಕಾಪು ಠಾಣೆಯಲ್ಲಿ ದೂರು ದಾಖಲಾಗಿದೆ.

ಕಾಪು ಠಾಣಾ ಪೊಲೀಸರು ರೌಂಡ್ಸ್ ಕರ್ತವ್ಯದಲ್ಲಿ ಇರುವಾಗ ಹಸನಬ್ಬ (48) ಎಂಬಾತನನ್ನು ಮಾದಕ ವಸ್ತು ಸೇವಿಸಿರುವ ಅನುಮಾನದ ಮೇರೆಗೆ ವಶಕ್ಕೆ ಪಡೆದು ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದರು. ಈತನ ವೈದ್ಯಕೀಯ ಪರೀಕ್ಷಾ ವರದಿಯಲ್ಲಿ ಗಾಂಜಾ ಸೇವಿಸಿರುವುದು ದೃಢಪಟ್ಟ ಕಾರಣ ಈತನ ವಿರುದ್ಧ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!