ಉಡುಪಿ: ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜರಿಗೆ ಅಭಿನಂದನೆ

ಉಡುಪಿ ಜೂ.11(ಉಡುಪಿ ಟೈಮ್ಸ್ ವರದಿ): 2ನೇ ಅವಧಿಗೆ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದ ಐವನ್ ಡಿಸೋಜ ಅವರನ್ನು ಉಡುಪಿ ಜಿಲ್ಲಾ ಕ್ರೈಸ್ತ ಸಮುದಾಯದವರ ವತಿಯಿಂದ ಡಾನ್ ಬಾಸ್ಕೋ ಸಭಾಭವನದಲ್ಲಿ ಅಭಿನಂದಿಸಲಾಯಿತು.

ಅಭಿನಂದನಾ ಭಾಷಣ ಮಾಡಿದ ಉಡುಪಿ ಶೋಕ ಮಾತ ದೇವಾಲಯದ ಪ್ರಧಾನ ಧರ್ಮಗುರು ಫಾ. ಚಾರ್ಲ್ಸ್ ಮಿನೇಜಸ್ ಅವರು,  ಐವನ್ ಡಿಸೋಜರವರು ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆ ಆಗಿರುವುದು ಸಮಾಜ ಮತ್ತು ಪಕ್ಷಕ್ಕೆ  ಅವರು ನೀಡಿದ ಸೇವೆಗೆ ಸಿಕ್ಕ ಪ್ರತಿಫಲ. ಸರ್ಕಾರ ನಮ್ಮ ಕ್ರೈಸ್ತ ಸಮಾಜಕ್ಕೆ ನೀಡಿದ ಕೊಡುಗೆ.  ಐವನ್ ಡಿಸೋಜ ಇವರ ಸೇವೆಯು ಸಮಾಜದ ಕಟ್ಟಕಡೆಯ ವ್ಯಕ್ತಿಗೆ ತಲುಪಲಿ ಎಂದು ಶುಭ ಹಾರೈಸಿದರು.

ಕ್ರೈಸ್ತ ಬಾಂಧವರ ಸನ್ಮಾನ ಸ್ವೀಕರಿಸಿ ಮಾತನಾಡಿದ ಐವನ್ ಡಿಸೋಜ ಅವರು, ಈ ಹುದ್ದೆಯು ಕ್ರೈಸ್ತ ಸಮುದಾಯದ ಕೊಡುಗೆಯನ್ನು ಗುರುತಿಸಿ ಕಾಂಗ್ರೆಸ್ ಸರಕಾರ ಈ ಹುದ್ದೆಯನ್ನು ನೀಡಿದೆ. ಈ ಹುದ್ದೆಯನ್ನು ಪಡೆದ ನಾನು ಧನ್ಯನು. ನನ್ನ ಅವಧಿಯಲ್ಲಿ ಸಮಾಜದ ಕುಂದು ಕೊರತೆಗಳನ್ನು ನನ್ನ ಕೈಲಾದ ಮಟ್ಟಿಗೆ ಸರಿಪಡಿಸಲು ಪ್ರಯತ್ನಿಸುತ್ತೇನೆ. ಹಾಗೇ ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ನ್ಯಾಯ ಒದಗಿಸಲು ಪ್ರಯತ್ನಿಸುತ್ತೇನೆ.  ಸಮಾಜದ ಎಲ್ಲಾ ವರ್ಗದ ಹಾಗೂ ಧರ್ಮದ ಜನರನ್ನು ಒಗ್ಗೂಡಿಸಿ ಅವರ ದ್ವನಿಯಾಗಿ ವಿಧಾನ ಪರಿಷತ್ ಮತ್ತು ಸರಕಾರದ ಮಟ್ಟದಲ್ಲಿ ನನ್ನ ಕೊಡುಗೆಯನ್ನು ಕೊಡಲು ಬದ್ದನಿದ್ದೇನೆ. ಕಳೆದ ಅವಧಿಯಲ್ಲಿ ಜಾತಿ ಧರ್ಮ ನೋಡದೆ ಮುಖ್ಯಮಂತ್ರಿ ನಿದಿಯಿಂದ ಧಾಖಲೆಯ ಮಟ್ಟದಲ್ಲಿ ಪರಿಹಾರ ನಿಧಿಯನ್ನು ಅಗತ್ಯವಿದ್ದವರಿಗೆ ತಲುಪಿಸಿದ್ದೇನೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಉಡುಪಿ ಶೋಕ ಮಾತ ದೇವಾಲಯದ ಪ್ರಧಾನ ಧರ್ಮ ಗುರುಗಳಾದ ಫಾ| ಚಾರ್ಲ್ಸ್ ಮಿನೆಜಸ್, ಸಂತ ಮೇರಿ ವಿದ್ಯಾಸಂಸ್ಥೆಗಳ ಪ್ರಾಂಶುಪಾಲರಾದ  ಫಾ| ವಿಜಯ್ ಡಿಸೋಜ, ಐವನ್ ಡಿಸೋಜರವರ ಧರ್ಮಪತ್ನಿ  ಡಾ. ಕವಿತಾ, ಪಾಲನ ಮಂಡಳಿಯ ಉಪಾಧ್ಯಕ್ಷ  ಮ್ಯಾಕ್ಷಿಮ್ ಡಿಸೋಜ, ಪ್ರಮುಖರಾದ ಜಿತೇಂದ್ರ ಪುರ್ತಾಡೋ, ಮೇರಿ ಡಿಸೋಜ, ಗ್ರೇಸಿ ಕರ್ಡೊಜ,ವಿಲ್ಸನ್ ರೋಡ್ರಿಗಸ್ ಶಿರ್ವ, ಮೆಲ್ವಿನ್ ಅರಾನ್ಹ, ಚಾರ್ಲ್ಸ್ ಅಂಬ್ಲರ್, ಕಥೋಲಿಕ್ ಸಭಾ ಉಡುಪಿ ಜಿಲ್ಲಾ ಅಧ್ಯಕ್ಷ ಸಂತೋಷ್ ಕರ್ನೆಲಿಯೋ, ಲೆಸ್ಲಿ ಕರ್ನೆಲಿಯೋ, ಪ್ರಶಾಂತ್ ಜತ್ತನ್ನ, ರೋಜಾರಿಯೋ ಡಿಸೋಜ, ಅನಿತಾ ಡಿಸೋಜ ಬೆಲ್ಮಣ್,  ಶಿರ್ವ ಗ್ರಾಮ ಪಂಚಾಯತ್ ಸದಸ್ಯ ಮೆಲ್ವಿನ್ ಡಿಸೋಜ, ಇಫ್ಕಾ ಸಂಘಟನೆಯ ಮಾಜಿ ಅಧ್ಯಕ್ಷ ಲುವಿಸ್ ಲೋಬೊ ಉಪಸ್ಥಿತರಿದ್ದರು.

ಅಭಿನಂದನ ಸಮಾರಂಭದ ಬಳಿಕ ಐವನ್ ಡಿಸೋಜರವರು ಧರ್ಮಧ್ಯಕ್ಷರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

Leave a Reply

Your email address will not be published. Required fields are marked *

error: Content is protected !!