ಮಲ್ಪೆ: ಗಾಂಜಾ ಸೇವನೆ-ಓರ್ವ ವಶ

ಮಲ್ಪೆ ಜೂ.12 (ಉಡುಪಿ ಟೈಮ್ಸ್ ವರದಿ): ಗಾಂಜಾ ಸೇವನೆ ಪ್ರಕರಣಕ್ಕೆ ಸಂಬಂಧಿಸಿ ತೆಂಕನಿಡಿಯೂರು ಸಭಾಭವನದ ಬಳಿ ಸಾರ್ವಜನಿಕ ಸ್ಥಳದಲ್ಲಿ ಓರ್ವ ಯುವಕನನ್ನು ಮಲ್ಪೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಮಲ್ಪೆ ಠಾಣಾ ಪೊಲೀಸರು ರೌಂಡ್ಸ್ ಕರ್ತವ್ಯದಲ್ಲಿ ಇದ್ದ ವೇಳೆ ತೆಂಕನಿಡಿಯೂರು ಸಭಾಭವನದ ಬಳಿ ಸಾರ್ವಜನಿಕ ಸ್ಥಳದಲ್ಲಿ ಅಮಲಿನಲ್ಲಿ ಇದ್ದಂತೆ ಕಂಡುಬಂದ ಯೋಗೀಶ(22) ಎಂಬ ಯುವಕನನ್ನು ಗಾಂಜಾ ಸೇವಿಸಿರುವ ಅನುಮಾನದ ಮೇರೆಗೆ ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದರು. ಈತನ ವೈದ್ಯಕೀಯ ಪರೀಕ್ಷಾ ವರದಿಯಲ್ಲಿ ಗಾಂಜಾ ಸೇವಿಸಿರುವುದು ದೃಢಪಟ್ಟ ಕಾರಣ ಈತನ ವಿರುದ್ಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!