ಉಡುಪಿ: 863 ಸೋಂಕು ದೃಢ, 6 ಸಾವು, 913 ಮಂದಿ ಸೋಂಕಿತರು ಗುಣಮುಖ

ಉಡುಪಿ ಮೇ19(ಉಡುಪಿ ಟೈಮ್ಸ್ ವರದಿ): ಜಿಲ್ಲೆಯಲ್ಲಿ ‌ಸಕ್ರಿಯ ಪ್ರಕರಣ ಗಳ ಸಂಖ್ಯೆ ಇಳಿಮುಖ ಆಗುತ್ತಿರುವುದು ಜಿಲ್ಲೆಯ ಜನತೆಗೆ ಕೊಂಚ ಸಮಾಧಾನ ತರುವಂತಹ ವಿಚಾರವಾಗಿದೆ. ಜಿಲ್ಲೆಯಲ್ಲಿ ಇಂದು 863 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಪೈಕಿ ಉಡುಪಿಯಲ್ಲಿ 320 ಕುಂದಾಪುರ 333 , ಕಾರ್ಕಳ 201 ಹಾಗೂ ಹೊರ ಜಿಲ್ಲೆಯ 9 ಮಂದಿಯಲ್ಲಿ ಸೋಂಕು ಇರುವುದು ಪತ್ತೆಯಾಗಿದೆ. ಸದ್ಯ ಜಿಲ್ಲೆಯಲ್ಲಿ 6,442 ಕೋವಿಡ್ ಸಕ್ರಿಯ ಪ್ರಕರಣ ಗಳಿವೆ.

ಇಂದು ಜಿಲ್ಲೆಯಲ್ಲಿ 6 ಮಂದಿ ಸೋಂಕಿತರು ಮೃತಪಟ್ಟಿದ್ದು, ಈ ಪೈಕಿ ಉಡುಪಿಯ ಇಬ್ಬರು ವ್ಯಕ್ತಿಗಳು ಹಾಗೂ ಓರ್ವ ಮಹಿಳೆ, ಕುಂದಾಪುರದ ಓರ್ವ ವ್ಯಕ್ತಿ ಹಾಗೂ ಓರ್ವ ಮಹಿಳೆ ಮತ್ತು ಕಾರ್ಕಳದ ಓರ್ವ ಮಹಿಳೆ ಸೋಂಕಿನಿಂದ ಪ್ರಾಣ ಕಳೆದುಕೊಂಡಿದ್ದಾರೆ. ಮೇ.18 ರಂದು ಜಿಲ್ಲೆಯಲ್ಲಿ 913 ಮಂದಿ ಸೋಂಕಿತರು ಆಸ್ಪತ್ರೆ ಯಿಂದ ಗುಣಮುಖರಾಗಿ ಹೊರ ಬಂದಿದ್ದು, ಈ ವರೆಗೆ ಒಟ್ಟು 42,513 ಮಂದಿ ಗುಣಮುಖರಾಗಿದ್ದಾರೆ.

ಮೇ. 18ರ ವೇಳೆಗೆ ಜಿಲ್ಲೆಯಲ್ಲಿ ಒಟ್ಟು 5, 54,381 ಮಂದಿಯನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಿದ್ದು, ಈ ಪೈಕಿ 49,236 ಮಂದಿಯಲ್ಲಿ ಸೋಂಕು ದೃಢ ಪಟ್ಟಿದೆ. ಈ ವರೆಗೆ ಜಿಲ್ಲೆಯಲ್ಲಿ ಒಟ್ಟು 281 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಇನ್ನು ಕೋವಿಡ್ ಸಕ್ರಿಯ ಪ್ರಕರಣಗಳು ಇಳಿಮುಖ ಆಗುತ್ತಿದ್ದರೂ ಸೋಂಕಿನಿಂದ ಪ್ರಾಣ ಕಳೆದುಕೊಳ್ಳುತ್ತಿರುವವರ ಸಂಖ್ಯೆ ಹೆಚ್ಚಾಗಿರುವುದರಿಂದ. ಜಿಲ್ಲೆಯ ಜನತೆ ಎಚ್ಚರಿಕೆ ಯಿಂದ ಇದ್ದು ಕೋವಿಡ್ ಮಾರ್ಗ ಸೂಚಿಗಳನ್ನು ಪಾಲಿಸುವ ಮೂಲಕ ಕೋವಿಡ್ ಮುಕ್ತ ಜಿಲ್ಲೆಯ ನಿರ್ಮಾಣಕ್ಕೆ ಸಹಕರಿಸಬೇಕಾಗಿದೆ.

Leave a Reply

Your email address will not be published. Required fields are marked *

error: Content is protected !!