ಕಮಲಶಿಲೆ: ದನ ಕಳವು- ಆರೋಪಿಗಳಿಗೆ ನ್ಯಾಯಾಂಗ ಬಂಧನ
ಶಂಕರನಾರಾಯಣ ಜೂ.22(ಉಡುಪಿ ಟೈಮ್ಸ್ ವರದಿ): ಕೆಳ ದಿನಗಳ ಹಿಂದೆ ಕಮಲಶಿಲೆ ದೇವಸ್ಥಾನದ ಗೋಶಾಲೆಯ ಬಳಿ ದನಕಳವು ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಶಂಕರನಾರಾಯಣ ಠಾಣಾ ಪೊಲೀಸರು ಬಂಧಿಸಿದ್ದು, ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಮಂಗಳೂರಿನ ಬಜ್ಪೆಯ ವಾಜೀದ್ ಜೆ (26) , ಫೈಜಲ್ (40 ) ಬಂಧಿತ ಆರೋಪಿಗಳು. ಬಂಧಿತರಿಂದ ಕೃತ್ಯಕ್ಕೆ ಬಳಸಿದ ಕಾರನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳಿಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಜೂ.16 ರಂದು ಬೆಳಿಗ್ಗಿನ ಜಾವ ಕಮಲಶಿಲೆ ದೇವಸ್ಥಾನ ಗೋಶಾಲೆಯ ಬಳಿ ದನಕಳವು ಮಾಡಲು ಆರೋಪಿಗಳು ಬಂದಿರುವುದಾಗಿ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಪ್ರಕರಣದ ತನಿಖೆ ನಡೆಸಿದ ಶಂಕರನಾರಾಯಣ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.