ದ.ಕ ಜಿಲ್ಲೆಯಲ್ಲಿ ಮಳೆಗಾಲ ಮುಗಿಯುವವರೆಗೆ ಟ್ರಕ್ಕಿಂಗ್ ನಿಷೇಧ – ಡಿಸಿ ಆದೇಶ
ಮಂಗಳೂರು ಜು.6 : ವ್ಯಾಪಕ ಮಳೆಯ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಗಾಲ ಮುಗಿಯುವವರೆಗೆ ಟ್ರೆಕ್ಕಿಂಗ್ ನಿಷೇಧಿಸಿ ಮತ್ತು ಜಿಲ್ಲೆಯ ಜಲ ಪ್ರದೇಶಗಳಲ್ಲೂ ಅನಧಿಕೃತ ಪ್ರವೇಶ ನಿರ್ಬಂಧಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.
ಭಾರಿ ಮಳೆಯಿಂದ ಭೂಕುಸಿತ, ಗುಡ್ಡ ಕುಸಿತ, ಮರ ಬೀಳುವ ಸಾಧ್ಯತೆ ಇರುವುದರಿಂದ ಮುಂಜಾಗೃತ ಕ್ರಮವಾಗಿ ಈ ಆದೇಶ ಹೊರಡಿಸಲಾಗಿದೆ. ದ.ಕ. ಜಿಲ್ಲೆಯ ಶಿಖರಗಳ ಟ್ರೆಕ್ಕಿಂಗ್, ಸಾಹಸ ಚಟುವಟಿಕೆಗಳಿಗೆ ನಿಷೇಧ ಹೇರಲಾಗಿದೆ. ಜಲಪಾತ, ಝರಿ, ನದಿ, ಸಮುದ್ರ, ಜಲಾಶಯದ ಪ್ರದೇಶಗಳಲ್ಲೂ ನಿರ್ಬಂಧಿಸಿಲಾಗಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.