ಮಣಿಪಾಲ: ಮಂಗಳೂರಿನ ವಿದ್ಯಾರ್ಥಿನಿ ಆತ್ಮಹತ್ಯೆ
ಮಣಿಪಾಲ ಜು.6(ಉಡುಪಿ ಟೈಮ್ಸ್ ವರದಿ): ಮಂಗಳೂರಿನ ಕಾಲೇಜಿನಲ್ಲಿ ಸಿಎ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹರಂದೂರು ಗ್ರಾಮದ ಶ್ರೀನಿಧಿ (20) ಆತ್ಮಹತ್ಯೆ ಮಾಡಿಕೊಂಡವರು.
ಮೃತಳ ತಂದೆ ಡಯಾಲಿಸ್ ಗಾಗಿ ಕೆ.ಎಂ.ಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅದಕ್ಕೋಸ್ಕರ ಉಡುಪಿ ತಾಲೂಕು ಹೆರ್ಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ತನ್ನ ಹೆಂಡತಿ ಹಾಗೂ ಮಗಳು ಶ್ರೀನಿಧಿಯವರೊಂದಿಗೆ ವಾಸವಿದ್ದರು.
ಈ ನಡುವೆ ನಿನ್ನೆ ಸಂಜೆ ಶ್ರೀನಿಧಿ ಅವರು ಮನೆಯಲ್ಲಿ ಯಾರೂ ಇಲ್ಲದ ವೇಳೆ ಜೀವನದಲ್ಲಿ ಜಿಗುಪ್ಸೆ ಹೊಂದಿ ತಾನು ವಾಸವಿರುವ ಬಾಡಿಗೆ ಮನೆಯ ರೂಮ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.