ಉಡುಪಿ: ನಗರಾಭಿವೃದ್ಧಿ ಪ್ರಾಧಿಕಾರದ ಸಾಮಾನ್ಯ ಸಭೆ
ಉಡುಪಿ ಜು.10(ಉಡುಪಿ ಟೈಮ್ಸ್ ವರದಿ):ನಗರಾಭಿವೃದ್ಧಿ ಪ್ರಾಧಿಕಾರದ ಸಾಮಾನ್ಯ ಸಭೆ ಇಂದು ಪ್ರಾಧಿಕಾರದ ಕಚೇರಿಯಲ್ಲಿ ನಡೆಯಿತು.
ಸಭೆಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಮಾತನಾಡಿ ನಗರಾಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಯ ಕೈಗಾರಿಕಾ ವಲಯದಲ್ಲಿ ವಾಸ್ತವ್ಯದ ಉದ್ದೇಶಾಕ್ಕಾಗಿ 10 ಸೈಂಟ್ಸ್ ಜಾಗವನ್ನು ಕನ್ವರ್ಷನ್ ಹಾಗೂ ಏಕ ವಿನ್ಯಾಸ ಮಾಡಲು ಹಿಂದೆ ಅವಕಾಶವಿತ್ತು. ಈಗ ಒಂದು ವರ್ಷಗಳಿಂದ 10 ಸೈಂಟ್ಸ್ ಜಾಗವನ್ನು ಕನ್ವರ್ಷನ್ ಹಾಗೂ ಏಕ ವಿನ್ಯಾಸ ಮಾಡಲು ಅವಕಾಶ ನೀಡುತ್ತಿಲ್ಲ ಇದರಿಂದ ಅನೇಕ ಕಡತಗಳು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಬಾಕಿಯಾಗಿದ್ದು ಇದರಿಂದ ಜನರು ಪರದಾಡುವಂತಾಗಿದೆ ಈ ಬಗ್ಗೆ ಇಲಾಖಾಧಿಕಾರಿಗಳು ಗಮನಹರಿಸಬೇಕು. ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿರುವ ಕೆರೆಗಳ ಅಭಿವೃದ್ಧಿಗೆ ಪ್ರಸ್ತಾವನೆ ಸಲ್ಲಿಸಿದ್ದು ಕಾಮಗಾರಿಗಳನ್ನು ಕೂಡಲೇ ಅನುಷ್ಠಾನಗೊಳಿಸಲು ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ, ಜಿಲ್ಲಾಧಿಕಾರಿಗಳಾದ ವಿದ್ಯಾ ಕುಮಾರಿ, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ಮಹೇಶ್ ಚಂದ್ರ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.