ಜ್ಞಾನಸುಧಾ : ಎನ್.ಎಸ್.ಎಸ್ ಕಾರ್ಯಚಟುವಟಿಕೆ ಉದ್ಘಾಟನೆ
ಕಾರ್ಕಳ ಜು.16(ಉಡುಪಿ ಟೈಮ್ಸ್ ವರದಿ) : ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ 2024-25ನೇ ಸಾಲಿನ ಎನ್.ಎಸ್.ಎಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ಇತ್ತೀಚಿಗೆ ಕಾಲೇಜಿನಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಉಡುಪಿಯ ನಿವೃತ್ತ ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ದಯಾನಂದ ಡಿ. ಅವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಶಿಸ್ತು ಸಂಯಮದಿಂದ ಕೂಡಿ, ನಾಯಕತ್ವದ ಗುಣ ರೂಪಿಸುತ್ತಾ ಸಾಮಾಜಿಕ ಕಳಕಳಿಯೊಂದಿಗೆ ದೇಶಭಕ್ತಿಯನ್ನು ಉದ್ದೀಪನಗೊಳಿಸುವ ಕಾರ್ಯ ಎನ್.ಎಸ್.ಎಸ್ ಮೂಡಿಸುತ್ತದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಈ ಬಾರಿ ಬೆಂಗಳೂರಿನ ಮಾಣ ಕ್ ಷಾ ಪರೇಡ್ ಮೈದಾನದಲ್ಲಿ ನಡೆದ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಭಾಗವಹಿಸಿದ ಎನ್.ಎಸ್.ಎಸ್. ವಿದ್ಯಾರ್ಥಿನಿ ಸಮಿಯಾ ಹೆಗ್ಡೆ ಇವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಕಾರ್ಕಳ ರೋಟರಿ ಕ್ಲಬ್ ಅಧ್ಯಕ್ಷರಾದ ರೊ| ಇಕ್ಬಾಲ್ ಅಹಮ್ಮದ್, ಕಾರ್ಕಳ ರೋಟರಿ ಕ್ಲಬ್ ಉಪಾಧ್ಯಕ್ಷ ಬಾಲಕೃಷ್ಣ ದೇವಾಡಿಗ, ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಸಿ.ಇ.ಒ ಹಾಗೂ ಪ್ರಾಂಶುಪಾಲ ದಿನೇಶ್ ಎಂ ಕೊಡವೂರ್, ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಪಿ.ಆರ್.ಒ ಜ್ಯೋತಿ ಪದ್ಮನಾಭ ಭಂಡಿ, ಕಾರ್ಕಳ ಜ್ಞಾನಸುಧಾ ಪ.ಪೂ.ಕಾಲೇಜಿನ ವಾಣಿಜ್ಯ ಶಾಸ್ತ್ರ ಉಪನ್ಯಾಸಕ ಶೈಲೇಶ್ ಶೆಟ್ಟಿ,
ಕಾರ್ಕಳ ಜ್ಞಾನಸುಧಾ ಪ.ಪೂ.ಕಾ. ರಾ.ಸೇ.ಯೋ.ಅಧಿಕಾರಿ ರವಿ.ಜಿ., ಆಂಗ್ಲಭಾಷಾ ಉಪನ್ಯಾಸಕಿ ಶಮಿತಾ ಮೂಡುಬೆಳ್ಳೆ, ವಿದ್ಯಾರ್ಥಿ ನಾಯಕರಾದ ಸುವೀಕ್ಷ ಮತ್ತು ಆಯುಷ್ ಉಪಸ್ಥಿತರಿದ್ದರು.