ನಂದಿಕೂರು M11 ಇಂಡಸ್ಟ್ರೀಸ್ ಪ್ರೈ.ಲಿ.ಗೆ ಡಿ.ಸಿ, ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ

ಕಾಪು ಜು.29: ನಂದಿಕೂರುವಿನ M11 ಇಂಡಸ್ಟ್ರೀಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯವರು ಹೊಸದಾಗಿ ಸ್ಥಾಪಿಸಿರುವ ಪಾಮ್ ಆಯಿಲ್, ಸನ್ ಫ್ಲವರ್ ಆಯಿಲ್ ಮತ್ತು ಬಯೋಡೀಸಲ್ ಉತ್ಪಾದನಾ ಘಟಕಕ್ಕೆ ಇಂದು ಶಾಸಕರಾದ ಗುರ್ಮೆ ಸುರೇಶ ಶೆಟ್ಟಿ ಹಾಗೂ ಜಿಲ್ಲಾಧಿಕಾರಿಗಳಾದ ವಿದ್ಯಾ ಕುಮಾರಿ ಅವರೊಂದಿಗೆ ಭೇಟಿ ನೀಡಿದರು.

ಘಟಕದಲ್ಲಿ  ಸ್ಥಳೀಯವಾಗಿ ಉಂಟಾಗುತ್ತಿರುವ ಮಾಲಿನ್ಯ ಸಮಸ್ಯೆ ಸಲುವಾಗಿ ಭೇಟಿ ನೀಡಿ ಸಂಸ್ಥೆಯ ಮುಖ್ಯಸ್ಥರೊಂದಿಗೆ ಚರ್ಚಿಸಿದರು. ಹಾಗೂ M11 ಇಂಡಸ್ಟ್ರೀಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯಲ್ಲಿ ಮಾಲಿನ್ಯ ನಿಯಂತ್ರಿಸುವಲ್ಲಿ ಕೆಲವೊಂದು ತಾಂತ್ರಿಕ ದೋಷಗಳಿದ್ದು ಅವುಗಳನ್ನು ಸರಿಪಡಿಸಿಕೊಂಡು ಸ್ಥಳೀಯರಿಗೆ ಸಮಸ್ಯೆ ಆಗದ ರೀತಿಯಲ್ಲಿ  ಮುಂದುವರೆಯಬೇಕು ಒಂದು ತಿಂಗಳ ಹಿಂದೆ ಈ ಬಗ್ಗೆ ತಮಗೆ ಸೂಚನೆ ನೀಡಲಾಗಿದ್ದು ಮುಂದಿನ ದಿನಗಳಲ್ಲಿ ಸೂಕ್ತ ವ್ಯವಸ್ಥೆ ಮಾಡದಿದ್ದಲ್ಲಿ ಇದರ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಜೊತೆಗೆ ಸ್ಥಳೀಯರಿಗೆ ಉದ್ಯೋಗಾವಕಾಶವನ್ನು ನೀಡುವಂತೆ ಸೂಚಿಸಲಾಯಿತು. 

ಈ ಸಂದರ್ಭದಲ್ಲಿ ಪಲಿಮಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸೌಮ್ಯಲತಾ ಶೆಟ್ಟಿ, ಉಪಾಧ್ಯಕ್ಷರಾದ ರಾಯೇಶ್ ಪೈ, ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶಶಿಕಲಾ, ಉಪಾಧ್ಯಕ್ಷರಾದ ಹೇಮಚಂದ್ರ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಶಶಿಕಾಂತ್ ಪಡುಬಿದ್ರಿ, ಸ್ಥಳೀಯರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ನಾಗೇಶ್ ಭಟ್, ಸಹಾಯಕ ಆಯುಕ್ತರಾದ ಮಹೇಶ್ ಚಂದ್ರ, ಕಾಪು ತಹಶೀಲ್ದಾರರಾದ ಪ್ರತೀಭಾ, ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕರಾದ ನಾಗರಾಜ್ ನಾಯಕ್, ಕಾಪು ತಾಲೂಕು ಕಾರ್ಯನಿರ್ವಹಣಾಧಿಕಾರಿ ಜೇಮ್ಸ್ ಡಿಸಿಲ್ವ, ಪೊಲ್ಲ್ಯೂಷನ್ ಬೋರ್ಡ್ ಅಧಿಕಾರಿಗಳು, M11 ಕಂಪೆನಿಯ ಅಧಿಕಾರಿಗಳು, ಪಲಿಮಾರು ಗ್ರಾಮ ಪಂಚಾಯತ್ ಸದಸ್ಯರು, ಸ್ಥಳೀಯ ಸಂಘ ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!