ಮಣಿಪಾಲ: ಕೊರಗ ಸಮುದಾಯದ ಅಹೋರಾತ್ರಿ ಧರಣಿಯಲ್ಲಿ ಪ್ರಮೋದ್ ಮಧ್ವರಾಜ್ ಭಾಗಿ
ಮಣಿಪಾಲ ಜು.30(ಉಡುಪಿ ಟೈಮ್ಸ್ ವರದಿ): ಕಳೆದ 7 ದಿನಗಳಿಂದ ಜಿಲ್ಲಾಧಿಕಾರಿಗಳ ಕಛೇರಿ ಎದುರು ನಡೆಯುತ್ತಿರುವ ಕೊರಗ ಸಮುದಾಯದ ಅಹೋ ರಾತ್ರಿ ಧರಣಿ ಸತ್ಯಾಗ್ರಹದಲ್ಲಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಭಾಗವಹಿಸಿದರು.
ಕೊರಗ ಅಭಿವೃದ್ದಿ ಸಂಘಗಳ ಒಕ್ಕೂಟ ಕರ್ನಾಟಕ- ಕೇರಳ ಇದರ ವತಿಯಿಂದ ಸಮುದಾಯದ ಯುವ ಜನರ 100% ಉದ್ಯೋಗ ಭರವಸೆ ಈಡೇರಿಕೆ ಹಾಗೂ ಕೃಷಿ ಭೂಮಿ ಹಕ್ಕು ಪತ್ರ ಮಂಜೂರಾತಿ ಬೇಡಿಕೆ ಈಡೇರಿಕೆಗಾಗಿ ನಡೆಯುತ್ತಿರುವ ಧರಣಿಯಲ್ಲಿ ಭಾಗವಹಿಸಿದ ಅವರು ಸಮುದಾಯದ ಜೊತೆಯಲ್ಲಿ ನಾನಿರುವುದಾಗಿ ತಿಳಿಸಿ, ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತ ಈ ಬಗ್ಗೆ ಗಂಭೀರವಾಗಿ ಗಮನಹರಿಸಿ ಸೂಕ್ತ ರೀತಿಯಲ್ಲಿ ಸ್ಪಂದಿಸುವಂತೆ ಮನವಿ ಮಾಡಿದರು.