ಕೊಡವೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ: ಮಕ್ಕಳಿಗೆ ಚಿತ್ರ ಬಿಡಿಸುವ ಸ್ಪರ್ಧೆ

ಕೊಡವೂರು ಆ.10(ಉಡುಪಿ ಟೈಮ್ಸ್ ವರದಿ): ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೊಡವೂರು ಇದರ ವತಿಯಿಂದ 56ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಪ್ರಯುಕ್ತ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಉಡುಪಿ ತಾಲೂಕು ಮಟ್ಟದ ಶ್ರೀ ಗಣೇಶನ ಚಿತ್ರ ಬಿಡಿಸುವ ಸ್ಪರ್ಧೆಯನ್ನು ಆ.25 ರಂದು ಮಧ್ಯಾಹ್ನ 2 ಗಂಟೆಗೆ ಕೊಡವೂರು ಶ್ರೀ ಶಂಕರ ನಾರಾಯಣ ದೇವಸ್ಥಾನದ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಮಹಿಳೆಯರಿಗೆ ತಾಲೂಕು ಮಟ್ಟದ ರಂಗವಲ್ಲಿ ಸ್ಪರ್ಧೆಯನ್ನು ಅದೇ ದಿನ ಸಾಯಂಕಾಲ ಗಂಟೆ 4.00ಕ್ಕೆ ಏರ್ಪಡಿಸಲಾಗಿದೆ. ಆಸಕ್ತರು ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ 8150824123, 9980261549, 7022809869 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸುವಂತೆ ಆಯೋಜಕರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!