ಉಡುಪಿ: ಕುಖ್ಯಾತ ಮನೆಗಳ್ಳನ ಬಂಧನ
ಉಡುಪಿ ಆ.26(ಉಡುಪಿ ಟೈಮ್ಸ್ ವರದಿ): ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಕುಖ್ಯಾತ ಮನೆಗಳ್ಳನನ್ನು ಪೊಲೀಸರು ಬಂಧಿಸಿದ್ದಾರೆ.
ಮಂಗಳೂರು ಮೂಲದ ಆರೀಫ್ ಯಾನೆ ಮುನ್ನಾ( 37) ಬಂಧಿತ ಆರೋಪಿ. ಬಂಧಿತನಿಂದ 35964 ಮೌಲ್ಯದ 5.400 ಗ್ರಾಂ ಚಿನ್ನಾಭರಣಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಒಂದು ಬೈಕ್‌ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಉಡುಪಿ ನಗರ ಸಭೆ ವ್ಯಾಪ್ತಿಯ ಮೂಡನಿಡಂಬೂರು ಗ್ರಾಮದ ಶಿರಿಬೀಡು ವಾರ್ಡ್ ನ ಕಾಡಬೆಟ್ಟ ಎಂಬಲ್ಲಿನ ಟಿ ಪ್ರಶಾಂತ್ ಪೈ ರವರ ವಾಸ್ತವ್ಯದ ಮನೆಯಲ್ಲಿ ಆ.18 ರಂದು ಕಳ್ಳತನ ನಡೆದಿತ್ತು. ಮನೆಯ ಬಾಗಿಲನ್ನು ಮುರಿದು ಒಳ ನುಗ್ಗಿದ ಕಳ್ಳರು. ದೇವರ ಪೋಟೋ ಮೇಲಿದ್ದ ಸುಮಾರು ತಲಾ ಒಂದು ಗ್ರಾಂ ತೂಕವಿರುವ 7 ಚಿನ್ನದ ಲಕ್ಷ್ಮೀ ಪದಕವಿರುವ ಮಾಲೆಯನ್ನು ಕಳ್ಳತನ ಮಾಡಿಕೊಂಡು ಪರಾರಿಯಾಗಿದ್ದನು. ಈ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳ ಪತ್ತೆಗೆ ತಂಡ ರಚಿಸಿ. ಒಂದು ವಾರದಲ್ಲಿ ಉಡುಪಿಯ ಕೃಷ್ಣ ಮಠದ ರಾಜಂಗಣದ ಬಳಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಿರುದ್ಧ ಈಗಾಗಲೇ ಹಾಸನ , ದಕ್ಷಿಣ ಕನ್ನಡ ಜಿಲ್ಲೆ ಉಡುಪಿ ಜಿಲ್ಲೆಗಳ ವಿವಿಧ ಪೊಲೀಸ್ ಠಾಣೆಗಳಲ್ಲಿ 15 ಕ್ಕೂ ಹೆಚ್ಚೂ ಪ್ರಕರಣಗಳು ದಾಖಲಾಗಿದೆ ಎಂದು ತಿಳಿದು ಬಂದಿದೆ.