ಮಣಿಪಾಲ: ವಿದ್ಯಾರ್ಥಿಗಳ ಲ್ಯಾಪ್‌ಟಾಪ್, ಟ್ಯಾಬ್ ಕಳವು- ಇಬ್ಬರು ಅರೆಸ್ಟ್
ಮಣಿಪಾಲ ಆ.2(ಉಡುಪಿ ಟೈಮ್ಸ್ ವರದಿ): ಅಪಾರ್ಟ್ಮೆಂಟ್‌ವೊಂದರ ವಿದ್ಯಾರ್ಥಿಗಳ ರೂಮಿನಿಂದ ಬೆಳೆಬಾಳುವ ಎಲೆಕ್ಟ್ರಾನಿಕ್ ಸಾಧನಗಳನ್ನು ಕಳ್ಳತನ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿ ಇಬ್ನರು ಆರೋಪಿಗಳನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.
ತಮಿಳುನಾಡಿನ ತಿರುಪತ್ತೂರು ಜಿಲ್ಲೆಯ ಬಾಲನ್ (34), ಆಂಧ್ರಪ್ರದೇಶದ ಚಿತ್ತೂರಿನ ಕಾರ್ತಿಕ್ (28) ಬಂಧಿತ ಆರೋಪಿಗಳು. ಬಂಧಿತರಿಂದ 400000/- ರೂ ಮೌಲ್ಯದ ಎರಡು ಲ್ಯಾಪ್ ಟಾಪ್ ಮತ್ತು ಆಪಲ್ ಕಂಪನಿಯ ಒಂದು ಐಪಾಡ್ ನ್ನು ವಶಪಡಿಸಿಕೊಳ್ಳಲಾಗಿದೆ.
ಆ.31 ರಂದು ಮಣಿಪಾಲ ಠಾಣಾ ವ್ಯಾಪ್ತಿಯ ವಿದ್ಯಾರತ್ನ ನಗರದಲ್ಲಿ ಇರುವ ಅಪಾರ್ಟಮೆಂಟನ್ ನಿವಾಸಿ ಆಕಾಶ್ ಸಿ ಸೂರ್ಯ ವಂಶಿ ಎಂಬವರ ರೂಮಿನಲ್ಲಿ ಇದ್ದ ಸುಮಾರು 400000/- ರೂ ಮೌಲ್ಯದ ಎರಡು ಲ್ಯಾಪ್ ಟಾಪ್ ಮತ್ತು ಆಪಲ್ ಕಂಪನಿಯ ಒಂದು ಐಪಾಡ್ ಕಳತನವಾಗಿತ್ತು ಈ ಬಗ್ಗೆ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಿದ ಮಣಿಪಾಲ ಠಾಣಾ ಪೊಲೀಸರು ಆರೋಪಿಗಳನ್ನು ಉಡುಪಿಯ ಕಟಪಾಡಿ ಬಸ್ ನಿಲ್ದಾಣದಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
ಹಾಗೂ ಮಣಿಪಾಲ ನಗರದಲ್ಲಿ ಅನೇಕ ಅಪಾರ್ಟಮೆಂಟ್ ಗಳು ಇದ್ದು, ಬಹುತೇಕ ವಿದ್ಯಾರ್ಥಿಗಳು ಅಪಾರ್ಟಮೆಂಟ್ ನಲ್ಲಿ ವಾಸವಿದ್ದು, ವಿದ್ಯಾರ್ಥಿಗಳು ಬಳಸುವ ಬೆಲೆಬಾಳುವ ಎಲೆಕ್ಟ್ರಾನಿಕ್ ಸಾಧನಗಳಾದ ಲ್ಯಾಪ್ ಟಾಪ್, ಮೊಬೈಲ್, ಐಪಾಡ್ ಗಳನ್ನು ರೂಮ್ ನಲ್ಲಿ ಇಟ್ಟು ಬಾಗಿಲು ಹಾಕದೇ ನಿರ್ಲಕ್ಷವಹಿಸುತ್ತಿದ್ದಾರೆ. ಆರೋಪಿಗಳು ಇದನ್ನೇ ಗುರಿಯಾಗಿಸಿಕೊಂಡು ಕಳ್ಳತನ ಮಾಡುತ್ತಿರುವುದು ತನಿಖೆಯಿಂದ ಕಂಡು ಬಂದಿರುತ್ತದೆ. ಆದ್ದರಿಂದ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಜಾಗರೂಕತೆಯಿಂದ ಇರಬೇಕೆಂದು ಪೊಲೀಸರು ಸೂಚನೆ ನೀಡಿದ್ದಾರೆ.