ಮಣಿಪಾಲ ಕೆಎಂಸಿಯಲ್ಲಿ ಬಾಲ್ಯದ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ

ಮಣಿಪಾಲ ಸೆ.14(ಉಡುಪಿ ಟೈಮ್ಸ್ ವರದಿ): ಕೆಎಂಸಿ ವೈದ್ಯಕೀಯ ಕಾಲೇಜು ಮತ್ತು  ಆಸ್ಪತ್ರೆ, ಮಣಿಪಾಲದ ಮಕ್ಕಳ ರಕ್ತಶಾಸ್ತ್ರ  ಮತ್ತು ಆಂಕೊಲಾಜಿ ವಿಭಾಗದ ವತಿಯಿಂದ ಆಕ್ಸೆಸ್‌ಲೈಫ್ ಅಸಿಸ್ಟೆನ್ಸ್ ಫೌಂಡೇಶನ್ ಜೊತೆಗೆ ಆಸ್ಪತ್ರೆಯ ಸಿಬ್ಬಂದಿಗಳು , ವಿದ್ಯಾರ್ಥಿಗಳು ಸಾರ್ವಜನಿಕರಲ್ಲಿ ಬಾಲ್ಯದ ಕ್ಯಾನ್ಸರ್ ಗುಣಪಡಿಸುವ ಸಾಮರ್ಥ್ಯ  ಮತ್ತು ಅವಕಾಶದ ಜಾಗೃತಿ ಮೂಡಿಸುವ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಅಂಗವಾಗಿ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಕಾರಂಜಿಯನ್ನು ಚಿನ್ನದ ಬಣ್ಣದಿಂದ ಬೆಳಗಿಸಲಾಯಿತು.

ಕಾರ್ಯಕ್ರಮದಲ್ಲಿ ಪ್ರಾಧ್ಯಾಪಕರು ಮತ್ತು ವಿಭಾಗದ ಮುಖ್ಯಸ್ಥರಾದ  ಡಾ.ವಾಸುದೇವ ಭಟ್ ಕೆ ಅವರು ಮಾತನಾಡಿ, ”ಭಾರತದಲ್ಲಿ ಪ್ರತಿ ವರ್ಷ ಸುಮಾರು 78,000 ಮಕ್ಕಳು ಕ್ಯಾನ್ಸರ್‌ಗೆ ತುತ್ತಾಗುತ್ತಿದ್ದಾರೆ ಮತ್ತು ನಮ್ಮ ದೇಶದಲ್ಲಿ ಕಡಿಮೆ ಗುಣಮುಖರಾಗಲು ಪ್ರಮುಖವಾಗಿ ತಡವಾದ ರೋಗನಿರ್ಣಯ, ಕ್ಯಾನ್ಸರ್‌ನ  ಕುರಿತು  ಅಂಟಿಕೊಂಡಿರುವ ಮೂಢನಂಬಿಕೆಗಳು , ಸಂಪನ್ಮೂಲಗಳ ಕೊರತೆ ಮತ್ತು ಇತರ ಸಂಬಂಧಿತ ಸೋಂಕುಗಳು ಕಾರಣವಾಗಿದೆ” ಎಂದರು.

ಈ ಸಂದರ್ಭದಲ್ಲಿ ಆಸ್ಪತ್ರೆಯ ಆರೋಗ್ಯ ಕಾರ್ಯಕರ್ತರು , ವಿದ್ಯಾರ್ಥಿ ಸಮಿತಿ ಸ್ವಯಂಸೇವಕರು ಮತ್ತು ಇತರ ಸ್ವಯಂಸೇವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು.

ಈ ಕಾರ್ಯಕ್ರಮಕ್ಕೂ ಮುನ್ನ ಮಣಿಪಾಲ ಇನ್‌ಸ್ಟಿಟ್ಯೂಟ್ ಆಫ್ ಕಮ್ಯುನಿಕೇಷನ್‌ನಲ್ಲಿ ಕ್ಯಾನ್ಸರ್ ಚಿಕಿತ್ಸೆಗೆ ಒಳಗಾಗುತ್ತಿರುವ ಮಕ್ಕಳಿಗಾಗಿ ಮನರಂಜನಾ ಚಟುವಟಿಕೆಗಳನ್ನು ಏರ್ಪಡಿಸಲಾಗಿತ್ತು. ಕೆಎಂಸಿ ಸಾಂಸ್ಕೃತಿಕ ಸಮಿತಿಯ ಸದಸ್ಯರಿಂದ   ಜಾಗೃತಿ ಕುರಿತಾದ ಕಿರುನಾಟಕ  ಮತ್ತು ಮನರಂಜನಾ ಕಾರ್ಯಕ್ರಮ ನಡೆಯಿತು.

Leave a Reply

Your email address will not be published. Required fields are marked *

error: Content is protected !!