ರಾಜ್ಯಪಾಲರ ಪ್ರಾಸಿಕ್ಯೂಷನ್ ಆದೇಶವನ್ನು ಎತ್ತಿ ಹಿಡಿದ ಹೈಕೋರ್ಟ್- ಸಿಎಂ ಸಿದ್ದರಾಮಯ್ಯ ಅರ್ಜಿ ವಜಾ
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದಂತ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ರಾಜ್ಯಪಾಲರು ನೀಡಿದ್ದ ಪ್ರಾಸಿಕ್ಯೂಷನ್ ಆದೇಶವನ್ನು ಎತ್ತಿ ಹಿಡಿದಿದಿದ್ದು, ಸಿಎಂ ಸಿದ್ದರಾಮಯ್ಯ ಅರ್ಜಿ ವಜಾ ಮಾಡಿದೆ.
ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಹಿನ್ನೆಲೆಯಲ್ಲಿ ರಾಜಭವನ ಮತ್ತು ರಾಜ್ಯ ಸರ್ಕಾರದ ನಡುವೆ ಆರಂಭಗೊಂಡ ಸಂಘರ್ಷ ತೀವ್ರ ಸ್ವರೂಪವನ್ನು ಪಡೆದುಕೊಂಡಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ರಾಷ್ಟ್ರಪತಿಗಳಿಗೆ ದೂರು ನೀಡಲು ಕಾಂಗ್ರೆಸ್ ಮುಂದಾಗಿದೆ.
ರಾಜ್ಯಪಾಲರು ಬಿಜೆಪಿ ಸೂಚನೆಯಂತೆ ವರ್ತಿಸುತ್ತಿದ್ದಾರೆ ಎಂಬುವುದು ಕಾಂಗ್ರೆಸ್ ಆರೋಪವಾಗಿದ್ದರೆ, ರಾಜಭವನ ಕಾನೂನು ಪ್ರಕಾರವಾಗಿ ಕ್ರಮ ಕೈಗೊಳ್ಳುತ್ತಿದೆ ಎಂದು ಬಿಜೆಪಿ ಸಮರ್ಥನೆ ಮಾಡಿಕೊಳ್ಳುತ್ತಿದೆ. ಈ ನಡುವೆ ರಾಜ್ಯಪಾಲರ ಅಧಿಕಾರಕ್ಕೆ ಕತ್ತರಿ ಹಾಕುವ ಪ್ರಯತ್ನಕ್ಕೂ ರಾಜ್ಯ ಸರ್ಕಾರ ಮುಂದಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಸಂಪುಟದ ಸಹೋದ್ಯೋಗಿಗಳು ರಾಜ್ಯಪಾಲರ ಕಾರ್ಯ ವಿಧಾನ ಕುರಿತು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ದೂರು ನೀಡಲು ಮುಂದಾಗಿದ್ದಾರೆಂದು ತಿಳಿದುಬಂದಿದೆ.
Justice prevails… Prevailed..