ಬೈಂದೂರು ಮಾಜಿ ಶಾಸಕ ಲಕ್ಷ್ಮೀನಾರಾಯಣ ಇನ್ನಿಲ್ಲ

Oplus_131072

ಬೈಂದೂರು, ಸೆ.27(ಉಡುಪಿ ಟೈಮ್ಸ್ ವರದಿ): ಮಾಜಿ ಶಾಸಕ ಬೈಂದೂರು ಲಕ್ಮೀ ನಾಯರಾಯಣ(85) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ಮುಂಜಾನೆ ನಿಧನರಾಗಿದ್ದಾರೆ.

ಬೆಂಗಳೂರಿನಲ್ಲಿ ವಾಸವಾಗಿದ್ದ ಇವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು.

ಮೃತರು ಓರ್ವ ಪುತ್ರ, ಓರ್ವ ಪುತ್ರಿ ಸಹಿತ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

ಮೃತರ ಅಂತಿಮ ದರ್ಶನಕ್ಕಾಗಿ ಅವರ ಡಾಲರ್ ಕಾಲೋನಿಯಲ್ಲಿರುವ ಮನೆಯಲ್ಲಿ ಬೆಳಿಗ್ಗೆ 10.30 ರಿಂದ ಇರಿಸಲಾಗುವುದು, ಸಂಜೆ 4.30ಕ್ಕೆ ಬನಶಂಕರಿಯ ಚಿತ್ತಾಗಾರದಲ್ಲಿ ಅಂತಿಮ ಸಂಸ್ಕಾರವನ್ನು ನಡೆಸಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿವೆ.

ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ, ಬೈಂದೂರು ಮಾಜಿ ಶಾಸಕ ಲಕ್ಷ್ಮೀನಾರಾಯಣ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ಸಂತಾಪ

ಬಿಜೆಪಿ ಉಡುಪಿ ಮಾಜಿ ಜಿಲ್ಲಾಧ್ಯಕ್ಷ, ಬೈಂದೂರು ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕ ಬೈಂದೂರು ಲಕ್ಷ್ಮೀನಾರಾಯಣ ಅವರ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಸಂತಾಪ ವ್ಯಕ್ತಪಡಿಸಿದೆ.

ಸರಳ ಸಜ್ಜನಿಕೆಯ ಕ್ರಿಯಾಶೀಲ ವ್ಯಕ್ತಿತ್ವದ ಲಕ್ಷ್ಮೀನಾರಾಯಣ ಬೈಂದೂರು ಅವರು ದೂರದರ್ಶಿತ್ವದ ಚಿಂತನೆಯೊಂದಿಗೆ ಜಿಲ್ಲೆಯಾದ್ಯoತ ಪಕ್ಷ ಸಂಘಟನೆಗೆ ನೀಡಿದ ಕೊಡುಗೆ ಮಹತ್ವಪೂರ್ಣ.

ರಾಜ್ಯ ಮೀನುಗಾರಿಕಾ ನಿಗಮದ ಅಧ್ಯಕ್ಷರಾಗಿ, ರಾಮಕ್ಷತ್ರಿಯ ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷರಾಗಿ, ಬೈಂದೂರು ಶಾಸಕರಾಗಿ ಲಕ್ಷ್ಮೀನಾರಾಯಣ ಬೈಂದೂರು ಅವರು ಸಾಮಾಜಿಕವಾಗಿ ಸ್ಪಂದಿಸಿದ ರೀತಿ ಸ್ಮರಣೀಯ.

ಅಗಲಿದ ಅವರ ದಿವ್ಯಾತ್ಮಕ್ಕೆ ಭಗವಂತನು ಚಿರ ಶಾಂತಿಯನ್ನು ಕರುಣಿಸಲಿ ಹಾಗೂ ಕುಟುಂಬಕ್ಕೆ ಅವರ ಆಗಲುವಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸುವುದಾಗಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!