ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ –ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಉಡುಪಿ ಸೆ.27(ಉಡುಪಿ ಟೈಮ್ಸ್ ವರದಿ): ಜಿಲ್ಲಾ ಮಹಿಳಾ ಕಾಂಗ್ರೆಸ್ ಹಾಗೂ ಉಡುಪಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಜಂಟಿ ಆಶ್ರಯದಲ್ಲಿ ಇಂದು ಸಂಜೆ ಸದಸ್ಯತ್ವ ಅಭಿಯಾನ ಕಾರ್ಯಕ್ರಮವು ಜರುಗಿತು.

ರಾಜ್ಯ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿ ಹಾಗೂ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಗೆ ಉಸ್ತುವಾರಿ ಯಾಗಿರುವ ಚಂದ್ರಕಲಾ ರಾವ್ ಅವರು ಈ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, “ನಮ್ಮ ಪಕ್ಷದ  ಸಿದ್ಧರಾಮಯ್ಯ ಅವರ ನೇತೃತ್ವದ  ರಾಜ್ಯಸರ್ಕಾರವು ಮಹಿಳೆಯರಿಗಾಗಿ ಅನೇಕ ಸವಲತ್ತುಗಳನ್ನು ನೀಡಿರುವುದರಿಂದ ನಾವು ಹೆಚ್ಚು ಹೆಚ್ಚು ಮಹಿಳೆಯರನ್ನು ನಮ್ಮ ಕಾಂಗ್ರೆಸ್ ಪಕ್ಷಕ್ಕೆ ಸದಸ್ಯರನ್ನಾಗಿ ಸೇರಿಸಿಕೊಳ್ಳಬೇಕು. ಈ ಸದಸ್ಯತ್ವ ಅಭಿಯಾನ ಉಡುಪಿ ಜಿಲ್ಲೆಯ ಪ್ರತೀಯೊಂದು  ಬ್ಲಾಕ್ ಗಳಲ್ಲಿಯೂ ಚುರುಕುಗೊಳ್ಳಬೇಕು ಎಂದು ಹೇಳಿದರು. 

ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ವಾಗ್ಳೆ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ವೇಳೆ ಕಾಪು ಬ್ಲಾಕ್ ಅಧ್ಯಕ್ಷೆ ಶಾಂತಲತಾ ಶೆಟ್ಟಿ ಅವರನ್ನು ಸದಸ್ಯತ್ವ ಅಭಿಯಾನದಲ್ಲಿ ತೋರಿಸಿದ ಅತ್ಯುತ್ತಮ ನಿರ್ವಹಣೆಗೆ ಅಭಿನಂದಿಸಲಾಯಿತು. ಹಾಗೂ ಅತೀ ಹೆಚ್ಚು ಸದಸ್ಯರನ್ನು ನೋಂದಾಯಿಸಿ ಅಗ್ರ ಸ್ಥಾನವನ್ನು ಪಡೆಯುವ ಬ್ಲಾಕ್ ಗಳಿಗೆ ಬಹುಮಾನವನ್ನೂ ಘೋಷಿಸಲಾಯಿತು

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ಯುವ ನಾಯಕ ಪ್ರಸಾದ್ ರಾಜ್ ಕಾಂಚನ್, ಕಾರ್ಕಳ ಬ್ಲಾಕ್ ಅಧ್ಯಕ್ಷೆ ಅನಿತಾ ಡಿ’ಸೋಜಾ, ಉಡುಪಿ ಬ್ಲಾಕ್ ಅಧ್ಯಕ್ಷೆ ಮಮತಾ ಶೆಟ್ಟಿ, ಬೈಂದೂರು ಬ್ಲಾಕ್ ನ ನಿಯೋಜಿತ ಅಧ್ಯಕ್ಷ ಸೂರ್ಯಕಾಂತಿ, ಜಿಲ್ಲಾ ಮಹಿಳಾ ಕಾಂಗ್ರೆಸ್ ನ ಪದಾಧಿಕಾರಿ ಜ್ಯೋತಿ ಹೆಬ್ಬಾರ್ ಮೀನಾಕ್ಷಿ ಮಾಧವ ಬನ್ನಂಜೆ ,ಚಂದ್ರಿಕಾ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು. 

Leave a Reply

Your email address will not be published. Required fields are marked *

error: Content is protected !!