ಉಡುಪಿ: ಉಚಿತ ಆರೋಗ್ಯಕರ ವೃದ್ಧಾಪ್ಯದ ಜಾಗೃತಿ ಮತ್ತು ಸ್ಕ್ರೀನಿಂಗ್ ಪರೀಕ್ಷೆ ಕಾರ್ಯಕ್ರಮ
ಉಡುಪಿ ಸೆ. 27 : ಉಡುಪಿಯ ಡಾ.ಟಿಎಂಎ ಪೈ ಆಸ್ಪತ್ರೆಯ ವತಿಯಿಂದ ಆರೋಗ್ಯವಂತ ವೃದ್ಧಾಪ್ಯದ ಅಧ್ಯಯನ ಕೇಂದ್ರ ಮತ್ತು ಮಣಿಪಾಲ ಕಾಲೇಜ್ ಆಫ್ ಹೆಲ್ತ್ ಪ್ರೊಫೆಶನ್ಸ್ ಸಹಯೋಗದಲ್ಲಿ 60 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ವಯಸ್ಕರಿಗೆ ಉಚಿತ ಆರೋಗ್ಯಕರ ವೃದ್ಧಾಪ್ಯದ ಸ್ಕ್ರೀನಿಂಗ್ ಪರೀಕ್ಷೆ ಕಾರ್ಯಕ್ರಮವು ಸೆ.30 ಮತ್ತು ಅ.1 ರಂದು ಬೆಳಿಗ್ಗೆ 9:00 ರಿಂದ ಮಧ್ಯಾಹ್ನ 1:00 ರವರೆಗೆ ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯ ಮೂರನೇ ಮಹಡಿಯಲ್ಲಿ ಆಯೋಜಿಸಲಾಗಿದೆ.
ಈ ಕಾರ್ಯಕ್ರಮದಲ್ಲಿ ದೃಷ್ಟಿ ಮತ್ತು ಶ್ರವಣ ಪರೀಕ್ಷೆಗಳು, ಸ್ಮರಣೆ ಮತ್ತು ಮಾನಸಿಕ ಆರೋಗ್ಯ ತಪಾಸಣೆಗಳು, ಬೀಳುವಿಕೆಯ ಅಪಾಯದ ವಿಶ್ಲೇಷಣೆ, ಮಧುಮೇಹ-ಪಾದದ ತಪಾಸಣೆ ಮತ್ತು ಕ್ರಿಯಾತ್ಮಕ ಸಾಮರ್ಥ್ಯದ ತಪಾಸಣೆಗಳನ್ನು ಒಳಗೊಂಡು ಸಮಗ್ರ ಆರೋಗ್ಯ ತಪಾಸಣೆ ನಡೆಯಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.