ಕರ್ನಾಟಕದ ನಾಲ್ಕು ಜೆಸ್ವಿಟ್ ಉಪಯಾಜಕರಿಗೆ ಮಂಗಳೂರಿನಲ್ಲಿ ಗುರುದೀಕ್ಷೆ

ಉಡುಪಿ ಅ.12(ಉಡುಪಿ ಟೈಮ್ಸ್ ವರದಿ): ಕರ್ನಾಟಕ ಜೆಸ್ವಿಟ್ ಪ್ರಾಂತ್ಯದ ನಾಲ್ಕು ಉಪಯಾಜಕರುಗಳಿಗೆ ಮಂಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ಡಾನ್ಹರವರು ಯಾಜಕ ದೀಕ್ಷೆಯನ್ನು ಮಂಗಳೂರಿನ ಫಾತಿಮಾ ಧ್ಯಾನ ಮಂದಿರದಲ್ಲಿ ನೀಡಿದರು.

ವಂ. ಮ್ಯಾಕ್ಸಿಮ್ ಮಾರ್ಟಿನ್ ಡಿ’ಸೋಜ, ವಂ. ಜೋಸ್ವಿನ್ ಪಿರೇರಾ, ವಂ. ಕಿರಣ್ ಲೀಮಾ, ಹಾಗೂ ವಂ. ವಿಲ್ಸನ್ ಸಲ್ಡಾನ್ಹಾ ಅವತು ತಮ್ಮ ಪ್ರಭೊಧನೆಯಲ್ಲಿ ಓರ್ವ ಯಾಜಕನು ಕ್ರಿಸ್ತನ ರಾಯಭಾರಿಗಾಗಿ ತಮ್ಮ ಜೀವನದಲ್ಲಿ ಕ್ರಿಸ್ತನು ಸಾರಿದ ಮೌಲ್ಯಗಳನ್ನು ಪ್ರತಿಬಿಂಬಿಸಲು ಕರೆನೀಡಿದರು. ಹಾಗೂ “ದೇವರಿಂದ ಅಭಿಷಿಕ್ತನಾದವನ ಬಲವೇ ದೇವರ ಸಾನಿಧ್ಯ. ನಾವು ಕ್ರಿಸ್ತನಂತಾಗಲು ಕ್ರಿಸ್ತನ ಜೀವನ ಮತ್ತು ಕಾಯಕವನ್ನು ಅನುಸರಿಸುವ ಯಾಜಕರಾಗಬೇಕು” ಎಂದು ಕರೆ ನೀಡಿದರು. 

ಈ ಸಂದರ್ಭದಲ್ಲಿ ಕರ್ನಾಟಕ ಜೆಸ್ವಿಟ್ ಪ್ರಾಂತ್ಯದ ಪ್ರಾಂತ್ಯಾಧಿಕಾರಿಗಳಾದ ವಂದನೀಯ ಸ್ವಾಮಿ ಡಯನೀಶಿಯಸ್ ವಾಸ್, ಫಾತಿಮಾ ಧ್ಯಾನ ಮಂದಿರದ ಮುಖ್ಯಗುರುಗಳಾದ ವಂದನೀಯ ಸ್ವಾಮಿ ಅನಿಲ್ ಡಿ’ಮೆಲ್ಲೊ ಹಾಗೂ ನೂರಕ್ಕೂ ಹೆಚ್ಚು ಗುರುಗಳು ಹಾಗೂ ಕನ್ಯಾಸ್ತ್ರೀಯರು ಹಾಜರಿದ್ದರು. 

ವಂದನೀಯ ಸ್ವಾಮಿ ವಿಶ್ವಾಸ್ ಮಿಸ್ಕಿತ್‍ರವರು ಬಲಿಪೂಜೆಯ ನಿರ್ವಹಿಸಿದರು. ವಂದನೀಯ ಸ್ವಾಮಿ ಲೆಸ್ಟನ್ ಲೋಬೊರವರು ಕಾರ್ಯಕ್ರಮದ ಮೇಲ್ವಿಚಾರಣೆ ನಡೆಸಿದರು..

Leave a Reply

Your email address will not be published. Required fields are marked *

error: Content is protected !!