ಉಡುಪಿ: ಸಾಗರ ಕವಚ” ಅಣಕು ಕಾರ್ಯಾಚರಣೆ ಯಶಸ್ವಿ

ಉಡುಪಿ ಆ.17(ಉಡುಪಿ ಟೈಮ್ಸ್ ವರದಿ): ಇಂಡಿಯನ್ ಕೋಸ್ಟ್ ಗಾರ್ಡ್, ಕರಾವಳಿ ಕಾವಲು ಪೊಲೀಸ್, ಇಂಡಿಯನ್ ನೇವಿ, ಕಸ್ಟಮ್ಸ್,  ಮೀನುಗಾರಿಕೆ ಮತ್ತು ಬಂದರು ಇಲಾಖೆ, ಜಿಲ್ಲಾ ಪೊಲೀಸ್ ಇಲಾಖೆಯ ಜಂಟಿ ಸಹಯೋಗದಲ್ಲಿ  ಸತತ 36 ಗಂಟೆ ಕಾಲ “ಸಾಗರ ಕವಚ” ಅಣಕು ಕಾರ್ಯಾಚರಣೆಯು ಯಶಸ್ವಿಯಾಗಿ ನಡೆಸಲಾಯಿತು.

ಅ.16 ರಿಂದ ಅ.17 ರ ವರೆಗೆ ನಡೆದ ಈ ಅಣಕು ಕಾರ್ಯಾಚರಣೆಯಲ್ಲಿ 25 ಕಡೆಗಳಲ್ಲಿ ನಡೆದ ವಿಧ್ವಂಸಕ ಕೃತ್ಯವನ್ನು ತಡೆಗಟ್ಟುವಲ್ಲಿ ಕರಾವಳಿ ಕಾವಲು ಪೊಲೀಸ್ ಮತ್ತು ಮೂರು ಜಿಲ್ಲೆಗಳ ಕಾನೂನು ಸುವ್ಯವಸ್ಥೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಈ ಕಾರ್ಯಾಚರಣೆಯು ಕರ್ನಾಟಕ ಕರಾವಳಿ ತೀರ ಪ್ರದೇಶದ ರಕ್ಷಣಾ ವ್ಯವಸ್ಥೆಯನ್ನು ಇನ್ನಷ್ಟು ಸದೃಡಗೊಳಿಸಲು ಸಹಕಾರಿಯಾಗಿದೆ.

Leave a Reply

Your email address will not be published. Required fields are marked *

error: Content is protected !!