ಉಡುಪಿ: ಉದ್ಯಮಿ ಡಾ.ವಿಜಯ ಸಂಕೇಶ್ವರ ಮಡಿಲಿಗೆ “ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿ”

ಕೋಟ‌ ಅ.17(ಉಡುಪಿ ಟೈಮ್ಸ್ ವರದಿ):  ಪಂಚವರ್ಣ ಯುವಕ ಮಂಡಲ ಕೋಟ ಹಾಗೂ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ವತಿಯಿಂದ ಕೊಡ ಮಾಡುವ “ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿ” ಈ ಬಾರಿ ಉದ್ಯಮಿ ಡಾ.ವಿಜಯ ಸಂಕೇಶ್ವರ ಅವರಿಗೆ ಲಭಿಸಿದೆ.

ಈ ಬಗ್ಗೆ ಸಂಘದ ಅಧ್ಯಕ್ಷ ಅಜಿತ್ ಆಚಾರ್ ಹಾಗೂ ಸ್ಥಾಪಾಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ ಅವರು ಮಾಹಿತಿ ನೀಡಿದ್ದಾರೆ. ನ.16 ರಂದು ಕೋಟದ ಗಾಂಧಿ ಮೈದಾನದಲ್ಲಿ ಸದ್ಭಾವನಾ 2024 ಎಂಬ ಶೀರ್ಷಿಕೆಯಡಿಯಲ್ಲಿ ನಡೆಯುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ಪ್ರಧಾನ ಮಾಡಲಾಗುವುದು.

ಪ್ರತಿವರ್ಷ ರಾಜ್ಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೈದ ಸಾಧಕರಿಗೆ ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡುತ್ತಾ ಬಂದಿದ್ದು ಈ ಬಾರಿ ಕನ್ನಡ ನಾಡು ಕಂಡ ಶ್ರೇಷ್ಠ ಉದ್ಯಮಿ ಪದ್ಮಶ್ರೀ ಪುರಸ್ಕೃತ ಡಾ.ವಿಜಯ ಸಂಕೇಶ್ವರ ರವರಿಗೆ ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ಮಾಡಲಿದೆ. ಪ್ರಶಸ್ತಿ 20 ಸಾವಿರ ಮೌಲ್ಯದ ಬೆಳ್ಳಿ  ಫಲಕ ಹಾಗೂ ನಗದು ಒಳಗೊಂಡಿದೆ ಎಂದು ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಸ್ಥಳೀಯ ಸಾಧಕರಿಗೆ ವಿಶೇಷ ಅಭಿನಂದನೆ ಸಲ್ಲಿಸಲಾಗುವುದು. ಹಾಗೂ ವಿಶೇಷ ಪುರಸ್ಕಾರವನ್ನು ಪರಿಸರಸ್ನೇಹಿ ಸಂಘಟನೆ ಸ್ವಚ್ಛ ಬ್ರಿಗೇಡ್ ಕಾರ್ಕಳ ತಂಡಕ್ಕೆ ನೀಡಲಾಗುತ್ತದೆ. ಪ್ರತಿಭಾ ಪುರಸ್ಕಾರ, ಅಶಕ್ತರಿಗೆ, ಅನಾರೋಗ್ಯ ಪೀಡಿತರಿಗೆ, ವಿದ್ಯಾರ್ಥಿವೇತನ, ಸ್ಥಳೀಯ ಅಂಗನವಾಡಿಗೆ ಸಮವಸ್ತ್ರ , ಕನ್ನಡ ಮಾಧ್ಯಮ ಸರಕಾರಿ ಶಾಲೆಗಳಿಗೆ ದತ್ತಿನಿಧಿ ಸೇರಿದಂತೆ ವಿವಿಧ ಸಮಾಜಮುಖಿ ಕಾರ್ಯಕ್ರಮಗಳು ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.

ಈ ಸಮಾರಂಭದಲ್ಲಿ ವಿಶೇಷ ಆಹ್ವಾನಿತರಾಗಿ ಕನ್ನಡ ಚಿತ್ರರಂಗದ ಶ್ರೇಷ್ಟ ನಟ ಎಸ್ ದೊಡ್ಡಣ್ಣ,ಗಂಗಾವತಿ ಶಾಸಕ ಗಾಲಿ ಜನರ್ದನ ರೆಡ್ಡಿ ಉಪಸ್ಥಿತರಿರಲಿದ್ದು, ಸಾಂಸ್ಕೃತಿಕ ಕಾರ್ಯಕ್ರಮದ ಭಾಗವಾಗಿ ಮಯೂರಿ ನೃತ್ಯ ತಂಡ ಕುಂಭಾಶಿ, ಸ್ಥಳೀಯ ಅಂಗನವಾಡಿ ಪುಟಾಣಿಗಳಿಂದ ನೃತ್ಯ, ಅವಿಭಜಿತ ಜಿಲ್ಲೆಗಳ ಪ್ರಸಿದ್ಧ ನಾಟಕ ತಂಡ ಪಿಂಗಾರ್ ಕಲಾವಿದರ್ ಬಿದ್ರೆ ಇವರ ಸಾಮಾಜಿಕ ಪೌರಾಣಿಕ  ಹಿನ್ನಲ್ಲೆಯಯಳ್ಳ ಹಾಸ್ಯಮಯ ಕದಂಬ ನಾಟಕ ಪ್ರದರ್ಶನಗೊಳ್ಳಲಿದೆ ಎಂದು ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!