ಕಾಪು: ನ.08- ದಂಡತೀರ್ಥ ಪಿಯು ಕಾಲೇಜಿನ ರಜತ ಮಹೋತ್ಸವ
ಕಾಪು ನ.05: ಉಳಿಯಾರಗೋಳಿ ದಂಡತೀರ್ಥ ವಿದ್ಯಾ ಸಂಸ್ಥೆ ಸಂಚಾಲಿತ ದಂಡತೀರ್ಥ ಪಿಯು ಕಾಲೇಜಿನ ರಜತ ಮಹೋತ್ಸವವು ನ.8 ರಂದು ಸಂಸ್ಥೆಯ ಆವರಣದಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಮುಖ್ಯಸ್ಥ ಡಾ. ಕೆ ಪ್ರಶಾಂತ್ ಶೆಟ್ಟಿ ಹೇಳಿದ್ದಾರೆ.
ಉಳಿಯಾರಗೋಳಿ ದಂಡ ತೀರ್ಥ ವಿದ್ಯಾ ಸಂಸ್ಥೆಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ಕಾರ್ಯಕ್ರಮವನ್ನು ಎಂಆರ್ ಜಿ ಸಂಸ್ಥೆಯ ಮುಖ್ಯಸ್ಥ ಡಾ. ಕೆ ಪ್ರಕಾಶ್ ಶೆಟ್ಟಿ ಅವರು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ವಹಿಸಲಿದ್ದಾರೆ. ಸಂಸ್ಥೆಯ ನಿರ್ಮಾತೃ ದಿ. ಡಾಕ್ಟರ್ ಪ್ರಭಾಕರ್ ಶೆಟ್ಟಿ ಅವರ ಪುತ್ತಳಿಯ ಅನಾವರಣವನ್ನು ನಿಟ್ಟೆ ಯುನಿವರ್ಸಿಟಿಯ ಚಾನ್ಸ್‌ಲರ್ ಡಾ. ಎಂ ಶಾಂತರಾಮ ಶೆಟ್ಟಿ ಹಾಗೂ ಮಣಿಪಾಲ ಯುನಿವರ್ಸಿಟಿಯ ಪ್ರೊ. ಚಾನ್ಸ್‌ಲರ್ ಡಾ. ಎಚ್ಎಸ್ ಬಳ್ಳಾಲ್ ನೆರವೇರಿಸಲಿದ್ದಾರೆ. ಸ್ಮರಣ ಸಂಚಿಕೆಯನ್ನು ಅನಿವಾಸಿ ಭಾರತೀಯ ಉದ್ಯಮಿ ದಿವಾಕರ ಶೆಟ್ಟಿ ಬಿಡುಗಡೆಗೊಳಿಸಲಿದ್ದಾರೆ ಎಂದು ತಿಳಿಸಿದರು.
ಈ ವೇಳೆ ಸಾಂಸ್ಕೃತಿಕ ಕಾರ್ಯಕ್ರಮಗಳೂ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಅನಿವಾಸಿ ಭಾರತೀಯ ಉದ್ಯಮಿ ಮೊಹಮ್ಮದ್ ಅಸ್ಲಾಂ ಖಾಜಿ, ಚಂದ್ರಶೇಖರ್ ಶೆಟ್ಟಿ, ಡಾ. ಅಶೋಕ್ ಹೆಗ್ಡೆ, ಶಿಕ್ಷಣಾಧಿಕಾರಿ ಮಾರುತಿ, ಶಾಲಾ ಹಳೆ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷ ಕಾಪು ದಿವಾಕರ್ ಶೆಟ್ಟಿ ಉದ್ಯಮಿಗಳಾದ ಕೆ. ವಾಸುದೇವ ಶೆಟ್ಟಿ, ಮನೋಹರ ಶೆಟ್ಟಿ ಕಾಪು ಉಪಸ್ಥಿತರಿರಲಿದ್ದಾರೆ ಎಂದರು
ಹಾಗೂ ದಂಡತೀರ್ಥ ವಿದ್ಯಾ ಸಂಸ್ಥೆಯು 1917ರಲ್ಲಿ ಕನ್ನಡ ಮಾಧ್ಯಮ ಶಾಲೆ ಪ್ರಾರಂಭಗೊಂಡು, 1980 ರಲ್ಲಿ ಆಂಗ್ಲ ಮಾಧ್ಯಮ ಶಾಲೆ ಪ್ರಾರಂಭಗೊಂಡಿದೆ. 1999ರಲ್ಲಿ ಪಿಯು ಕಾಲೇಜು ಪ್ರಾರಂಭಗೊಂಡಿದೆ. ಇದೀಗ ನಮ್ಮ ಪಿಯು ಕಾಲೇಜಿನ ರಜತ ಮಹೋತ್ಸವ ನ. 8ರಂದು ಆಚರಿಸುತ್ತಿದೆ ಎಂದಿದ್ದಾರೆ.
ಈ ಸಂದರ್ಭದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ವಿದ್ಯಾ ಸಂಸ್ಥೆಯ ಗೌರವ ಸಲಹೆಗಾರ ಅಲ್ಬನ್ ರಾಡ್ರಿಗಸ್, ಪ್ರಾಂಶುಪಾಲ ನೀಲಾನಂದ ನಾಯ್ಕ್, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ಗ್ಯಾಬ್ರಿಯಲ್ ಮಸ್ಕರೇನಸ್, ಶಿವಣ್ಣ ಬಾಯರಿ ಉಪಸ್ಥಿತರಿದ್ದರು.