ಉಡುಪಿ :ಜಿಲ್ಲೆಯಲ್ಲಿ ಇಂದು( ಮೇ 28) 766 ಮಂದಿಯಲ್ಲಿ ಕೋವಿಡ್ ಸೋಂಕು ದೃಢ, 4 ಸಾವು
ಉಡುಪಿ ಮೇ 28( ಉಡುಪಿ ಟೈಮ್ಸ್ ವರದಿ): ಜಿಲ್ಲೆಯಲ್ಲಿ ಕೋವಿಡ್ ಸಕ್ರಿಯ ಪ್ರಕರಣ ಗಳು ಇಳಿಮುಖ ವಾಗುತ್ತಿವೆಯಾದರೂ ಸಾರ್ವಜನಿಕ ರು ನಿರ್ಲಕ್ಷ್ಯ ವಹಿಸದೆ ಕೋವಿಡ್ ಮಾರ್ಗಸೂಚಿ ಹಾಗೂ, ಸರಕಾರದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಜಿಲ್ಲೆಯನ್ನು ಕೋವಿಡ್ ಮುಕ್ತ ಜಿಲ್ಲೆಯಾಗಿಸುವಲ್ಲಿ ಕೈಜೋಡಿಸಬೇಕಾಗಿದೆ.
ಜಿಲ್ಲೆಯಲ್ಲಿ ಇಂದು 766 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಪೈಕಿ ಉಡುಪಿಯಲ್ಲಿ 285, ಕುಂದಾಪುರ ದಲ್ಲಿ 293 , ಕಾರ್ಕಳ ದಲ್ಲಿ 186 ಹಾಗೂ ಹೊರ ಜಿಲ್ಲೆಯ ಇಬ್ಬರಲ್ಲಿ ಸೋಂಕು ಇರುವುದು ಪತ್ತೆಯಾಗಿದೆ. ಸದ್ಯ ಜಿಲ್ಲೆಯಲ್ಲಿ 5942 ಕೋವಿಡ್ ಸಕ್ರಿಯ ಪ್ರಕರಣ ಗಳಿವೆ.
ಇಂದು ಜಿಲ್ಲೆಯಲ್ಲಿ 4 ಮಂದಿ ಸೋಂಕಿತರು ಮೃತಪಟ್ಟಿದ್ದು, ಈ ಪೈಕಿ ಉಡುಪಿಯ ಮೂವರು ಮಹಿಳೆಯರು ಹಾಗೂ ಕುಂದಾಪುರದ ಓರ್ವ ವ್ಯಕ್ತಿ ಸೋಂಕಿನಿಂದ ಪ್ರಾಣ ಕಳೆದುಕೊಂಡಿದ್ದಾರೆ.
ಮೇ. 27 ರಂದು ಜಿಲ್ಲೆಯಲ್ಲಿ 835 ಮಂದಿ ಸೋಂಕಿತರು ಆಸ್ಪತ್ರೆ ಯಿಂದ ಗುಣಮುಖರಾಗಿ ಹೊರ ಬಂದಿದ್ದು, ಈ ವರೆಗೆ ಒಟ್ಟು 50,608 ಮಂದಿ ಗುಣಮುಖರಾಗಿದ್ದಾರೆ. ಮೇ. 27 ರ ವೇಳೆಗೆ ಜಿಲ್ಲೆಯಲ್ಲಿ ಒಟ್ಟು 5,82,738 ಮಂದಿಯನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಿದ್ದು, ಈ ಪೈಕಿ 56,872 ಮಂದಿಯಲ್ಲಿ ಸೋಂಕು ದೃಢ ಪಟ್ಟಿದೆ. ಈ ವರೆಗೆ ಜಿಲ್ಲೆಯಲ್ಲಿ ಒಟ್ಟು 322 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಇನ್ನು ಜಿಲ್ಲೆಯಲ್ಲಿ 9 ಬ್ಲಾಕ್ ಫಂಗಸ್ ಪ್ರಕರಣಗಳು ಸಕ್ರಿಯವಾಗಿದೆ. ಈ ಪೈಕಿ ಉಡುಪಿಯಲ್ಲಿ 2, ಕುಂದಾಪುರದಲ್ಲಿ 2 ಹಾಗೂ ಹೊರ ಜಿಲ್ಲೆಯ 9 ಮಂದಿಯಲ್ಲಿ ಈ ಬ್ಲಾಕ್ ಫಂಗಸ್ ಪತ್ತೆಯಾಗಿದೆ. ಜಿಲ್ಲೆೆಯಲ್ಲಿ ಇಬ್ಬರು ಬ್ಲಾಕ್ ಫಂಗಸ್ ನಿಂದ ಗುಣ ಮುಖರಾಗಿದ್ದಾರೆ.
ಹಾಗೂ ಇಬ್ಬರು ಈ ಫಂಗಸ್ ಗೆ ಬಲಿಯಾಗಿದ್ದಾರೆ. ಒಟ್ಟು 13 ಬ್ಲಾಕ್ ಫಂಗಸ್ ನ ಪ್ರಕರಣಗಳು ಜಿಲ್ಲೆಯಲ್ಲಿ ಪತ್ತೆಯಾಗಿದೆ. ಮತ್ತು ಓರ್ವ ಬ್ಲಾಕ್ ಫಂಗಸ್ ರೋಗಿಯನ್ನು ವರ್ಗಾಯಿಸಲಾಗಿದೆ.