ನಕ್ಸಲ್ ಎನ್‌ಕೌಂಟರ್ ಪ್ರಕರಣ: ಮನೆಯ ಮಾಲೀಕ ಜಯಂತ್ ಗೌಡ ಪೊಲೀಸ್ ವಶಕ್ಕೆ- ಠಾಣೆಗೆ ಮುತ್ತಿಗೆ ಹಾಕಿದ ಸ್ಥಳೀಯರು
ಹೆಬ್ರಿ: ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮದ ಪೀತುಬೈಲ್ ಎಂಬಲ್ಲಿ ನಡೆದ ನಕ್ಸಲ್ ನಾಯಕ ವಿಕ್ರಂ ಗೌಡನ ಎನ್ ಕೌಂಟರ್ ಪ್ರಕರಣದ ತನಿಖೆಯ ಕುರಿತಾಗಿ ಘಟನೆ ನಡೆದ ಸ್ಥಳದ ನಿವಾಸಿ ಜಯಂತ್ ಗೌಡ ಅವರನ್ನು ಹೆಬ್ರಿ ಪೊಲೀಸರು ವಿಚಾರಣೆಗೆ ವಶಪಡಿಸಿಕೊಂಡಿದ್ದು, ಈ ಕುರಿತು ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿ ಠಾಣೆಗೆ ಮುತ್ತಿಗೆ ಹಾಕಿದ ಘಟನೆ ಇಂದು ನಡೆದಿದೆ.
ನಕ್ಸಲ್ ನಾಯಕ ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಘಟನೆ ನಡೆದ ಮನೆಯ ಮಾಲೀಕ ಜಯಂತ್ ಗೌಡ ಅವರನ್ನು ಇಂದು ಬೆಳಗ್ಗೆ ಹೆಬ್ರಿ ಪೊಲೀಸರು ಮಗಳ ಮನೆಯಿಂದ ಆತನನ್ನು ವಶಪಡಿಸಿಕೊಂಡು ಹೆಬ್ರಿ ಠಾಣೆಗೆ ಕರೆ ತಂದಿದ್ದಾರೆ.
ಈ ಬಗ್ಗೆ ಆತ ಅಮಾಯಕ ಆತನಿಗೆ ಏನು ತಿಳಿದಿಲ್ಲ ಅಂತವನನ್ನು ಯಾಕೆ ಠಾಣೆಗೆ ಕರೆದುಕೊಂಡು ಬಂದಿದ್ದೀರಿ ಅಲ್ಲಿಯೇ ವಿಚಾರಿಸಬಹುದಿತ್ತಲ್ಲ ಎಂದು ಮಲೆಕುಡಿಯ ಸಮಾಜದ ಮುಖಂಡರು ಹಾಗೂ ಗ್ರಾಮಸ್ಥರು ಠಾಣಾಧಿಕಾರಿ ಅವರಲ್ಲಿ ಮನವಿ ಮಾಡಿ ಆತನನ್ನು ಕೂಡಲೇ ಬಿಡುವಂತೆ ಒತ್ತಾಯಿಸಿದರು.
ಠಾಣೆಯ ಎದುರು ಗ್ರಾಮಸ್ಥರು, ಮಲೆಕುಡಿಯ ಸಂಘದವರು ಆಗಮಿಸಿ ಆಕ್ರೋಶ ವ್ಯಕ್ತಪಡಿಸುತ್ತಿರುವುದನ್ನು ಗಮನಿಸಿದ ಪೊಲೀಸರು ಮಧ್ಯಾಹ್ನ 3.15 ಕ್ಕೆ ಬಿಡುಗಡೆಗೊಳಿಸಿದರು.