ಡಿ.29: ಉಡುಪಿ ಧರ್ಮಪ್ರಾಂತ್ಯದಲ್ಲಿ ಜುಬಿಲಿ 2025 ವರ್ಷಕ್ಕೆ ಚಾಲನೆ

ಉಡುಪಿ: 2025 ವರ್ಷವನ್ನು ಏಸು ಕ್ರಿಸ್ತರು ಹುಟ್ಟಿ 2025 ವರ್ಷಗಳಾಗಿದ್ದು ಅದನ್ನು ಜುಬಿಲಿ ವರ್ಷವನ್ನಾಗಿ ಆಚರಿಸಲಾಗುತ್ತಿದ್ದು ಉಡುಪಿ ಧರ್ಮಪ್ರಾಂತ್ಯದಲ್ಲಿ ಡಿಸೆಂಬರ್ 29 ರಂದು ಭಾನುವಾರ ಮಿಲಾಗ್ರಿಸ್ ಕ್ಯಾಥೆಡ್ರಲ್ ನ ಮುಖ್ಯ ದ್ವಾರವನ್ನು ತೆರೆಯುವ ಮೂಲಕ ಉಡುಪಿ ಧರ್ಮಾಧ್ಯಕ್ಷರಾದ ಅತಿ ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ಚಾಲನೆ ನೀಡಲಿದ್ದಾರೆ.

ಜುಬಿಲಿ ವರ್ಷಕ್ಕೆ ಡಿಸೆಂಬರ್ 24 ರಂದು ವ್ಯಾಟಿಕನ್ ನಲ್ಲಿ ಪೋಪ್ ಜಗದ್ಗುರು ಬೆನಡಿಕ್ಟ್ ಅವರು ಸೈಂಟ್ ಪೀಟರ್ ಬೆಸಿಲಿಕಾದ ಮುಖ್ಯ ದ್ವಾರವನ್ನು ತೆರೆಯುವ ಮೂಲಕ ಉದ್ಘಾಟನೆ ಮಾಡಿದ್ದು ಉಡುಪಿ ಧರ್ಮಪ್ರಾಂತ್ಯದಲ್ಲಿ ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್‌ನಲ್ಲಿ ಬೆಳಿಗ್ಗೆ 8 ಗಂಟೆಗೆ ಬಲಿಪೂಜೆಯೊಂದಿಗೆ ಜುಬಿಲಿ ವರ್ಷಕ್ಕೆ ಚಾಲನೆ ನೀಡಲಾಗುವುದು. ಬಲಿಪೂಜೆಯಲ್ಲಿ ಧರ್ಮಾಧ್ಯಕ್ಷರೊಂದಿಗೆ ಹಲವಾರು ಧರ್ಮಗುರುಗಳೊಂದಿಗೆ ಭಕ್ತವೃಂದ ಭಾಗವಹಿಸಲಿದ್ದಾರೆ ಎಂದು ಉಡುಪಿ ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ವಂ|ಡೆನಿಸ್ ಡೆಸಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!