ಸುವರ್ಣ ತ್ರಿಭುಜ ಬೋಟ್ ಮುಳುಗಡೆ: 10 ಲಕ್ಷ ಪರಿಹಾರಕ್ಕೆ ಸಿಎಂ ಗೆ ಶಾಸಕ ಭಟ್ ಮನವಿ
ಮಂಗಳೂರು(ಉಡುಪಿ ಟೈಮ್ಸ್ ವರದಿ): ಸುವರ್ಣ ತ್ರಿಭುಜ ಬೋಟ್ ಮುಳುಗಡೆಯಾಗಿ ಕಣ್ಮರೆಯಾದ ಮೀನುಗಾರರ ಕುಟುಂಬಕ್ಕೆ ತಲಾ ರೂ. 10 ಲಕ್ಷ ಪರಿಹಾರ ನೀಡುವಂತೆ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪ ಬಳಿ ಶಾಸಕ ರಘುಪತಿ ಭಟ್ ಮನವಿ ಮಾಡಿದ್ದಾರೆ.
ಮಂಗಳೂರಿನಲ್ಲಿ ನಡೆಯುತ್ತಿರುವ ಭಾರತೀಯ ಜನತಾ ಪಾರ್ಟಿಯ ರಾಜ್ಯ ಕಾರ್ಯಕಾರಣಿ ಸಭೆಯಲ್ಲಿ ಭಾಗವಹಿಸಲು ಆಗಮಿಸಿದ್ದ ಮುಖ್ಯಮಂತ್ರಿಯವರನ್ನು ಭೇಟಿಯಾದ ಶಾಸಕ ಕೆ ರಘುಪತಿ ಭಟ್ ಸುವರ್ಣ ತ್ರಿಭುಜ ಬೋಟ್ ಮುಳುಗಡೆಯಾಗಿ ಮಾಲಕ ಸಹಿತ 7 ಜನ ಮೀನುಗಾರರು ಕಣ್ಮರೆಯಾಗಿರುತ್ತಾರೆ. ಕುಟುಂಬದವರು ಇವರನ್ನೇ ಅವಲಂಬಿಸಿಕೊಂಡಿದ್ದು, ಕುಟುಂಬದ ಆರ್ಥಿಕ ಪರಿಸ್ಥಿತಿಯು ತುಂಬಾ ಹದಗೆಟ್ಟಿರುತ್ತದೆ. 7 ಜನ ಮೀನುಗಾರರ ಕುಟುಂಬಕ್ಕೆ ಮೀನುಗಾರರ ಸಂಕಷ್ಟ ಪರಿಹಾರ ನಿಧಿಯಿಂದ ಕನಿಷ್ಠ ತಲಾ ರೂ. 10 ಲಕ್ಷ ಪರಿಹಾರವನ್ನು ದೊರಕಿಸಿಕೊಡುವಂತೆ ಮನವಿ ಮಾಡಿದರು.