ಕಾರಿಗೆ ಲಾರಿ ಡಿಕ್ಕಿ: ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವು

ಹುಬ್ಬಳ್ಳಿ: ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಮಹಿಳೆಯರ ಸಹಿತ ಐವರು ಸ್ಥಳದಲ್ಲೇ ಮೃತಪಟ್ಟ ಘಟನೆ ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಕಿರೇಸೂರು ಕ್ರಾಸ್‌ ಬಳಿ ನಡೆದಿದೆ.
ಮೃತರನ್ನು ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ಶಶಿಕಲಾ, ಶ್ವೇತಾ, ಅಂಜಲಿ, ಸಂದೀಪ್‌ ಮತ್ತು ವಿಠಲ್‌ ಎಂದು ಗುರುತಿಸಲಾಗಿದೆ
ಹುಬ್ಬಳ್ಳಿ ಗ್ರಾಮೀಣ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!