ಐಪಿಎಲ್ ಟಿ.20 ಮ್ಯಾಚ್: ಬೆಟಿಂಗ್ ಆಡುತ್ತಿದ್ದ ಆರೋಪಿಗಳು ಅರೆಸ್ಟ್
ಕೋಟ: ಐಪಿಎಲ್ ಟಿ.20 ಮ್ಯಾಚ್ ಗೆ ಸಂಬಂಧಪಟ್ಟಂತೆ ಸಾರ್ವಜನಿಕರಿಂದ ಹಣ ಸಂಗ್ರಹಿಸಿ ಕ್ರಿಕೆಟ್ ಬೆಟ್ಟಿಂಗ್ ಅಕ್ರಮ ದಂಧೆಯಲ್ಲಿ ತೊಡಗಿಕೊಂಡಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ಕುಂದಾಪುರ ತಾಲೂಕಿನ ತೆಕ್ಕಟ್ಟೆ ಗ್ರಾಮದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಮೀಪ ನಡೆದಿದೆ.
ಬಂಧಿತ ಆರೋಪಿಗಳನ್ನು ಕಿರಣ್, ಶಾಂತರಾಮ, ಅಜಿತ್ ಹಾಗೂ ವಿವೇಕ ಎಂದು ಗುರುತಿಸಲಾಗಿದೆ.
ಬೆಟ್ಟಿಂಗ್ ಆಡುತ್ತಿರುವ ಕುರಿತು ಖಚಿತ ಮಾಹಿತಿಯನ್ನು ಪಡೆದ ಕೋಟ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ರಾಘವೇಂದ್ರ ಸಿಯವರು, ಮೊಬೈಲ್ ಫೋನ್ ಹಿಡಿದುಕೊಂಡು ಕ್ರಿಕೆಟ್ ಬೆಟ್ಟಿಂಗ್ ವೆಬ್‌ಸೈಟ್ ಮುಖಾಂತರ ಅಕ್ರಮವಾಗಿ ಬೆಟ್ಟಿಂಗ್ ಆಡುತ್ತಿದ್ದ ಸ್ಥಳಕ್ಕೆ ಬಂದು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳ ಬಳಿ ಇದ್ದ ಬೆಟ್ಟಿಂಗ್ ಗೆ ಬಳಸಿದ ಎರಡು ಮೊಬೈಲ್ ಹಾಗೂ ನಗದು ೪ಸಾವಿರ ರೂ ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಇನ್ನು, ಈ ಬಗ್ಗೆ ಕೋಟ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.





