ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದ ನ್ಯಾಯಾಲಯ
ಉಡುಪಿ ಜೂ.8(ಉಡುಪಿ ಟೈಮ್ಸ್ ವರದಿ) ದೇಶವನ್ನೇ ಬೆಚ್ಚಿ ಬೀಳಿಸಿದ ಎನ್ ಆರ್ ಐ ಉದ್ಯಮಿ ಉಡುಪಿಯ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಮೂವರು ಆರೋಪಿಗಳಿಗೆ ಕೊನೆಗೂ ಉಡುಪಿ ನ್ಯಾಯಾಲಯ ಶಿಕ್ಷೆ ವಿಧಿಸಿದೆ.
ಪ್ರಕರಣಕ್ಕೆ ಸಂಬಂಧಿಸಿ ಭಾಸ್ಕರ್ ಶೆಟ್ಟಿಯನ್ನು ಕೊಲೆ ಮಾಡಿ ಹೋಮ ಕುಂಡದಲ್ಲಿ ಸುಟ್ಟ ಪತ್ನಿ ರಾಜೇಶ್ವರಿ ಶೆಟ್ಟಿ, ಮಗ ನವನೀತ್ ಶೆಟ್ಟಿ ಹಾಗೂ ನಿರಂಜನ್ ಭಟ್ ಗೆ ಉಡುಪಿ ನ್ಯಾಯಾಲಯ ಇಂದು ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದು ಮೂವರು ಆರೋಪಿಗಳಿಗೆ ಶಿಕ್ಷೆಯ ತೀರ್ಪು ನೀಡಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷ್ಯನಾಶದ ಆರೋಪ ಹೊತ್ತಿದ್ದ ಕಾರು ಚಾಲಕ ರಾಘವೇಂದ್ರನನ್ನು ನ್ಯಾಯಾಲಯ ಖುಲಾಸೆ ಗೊಳಿಸಿದೆ. 2016 ರ ಜುಲೈನಲ್ಲಿ ಪತಿಯನ್ನೇ ಕೊಂದು ಹೋಮ ಕುಂಡದಲ್ಲಿ ಸುಟ್ಟು ಹಾಕಿದ ಪ್ರಕರಣ ಇಡೀ ಕರಾವಳಿಗರನ್ನೇ ಬೆಚ್ಚಿ ಬೀಳಿಸುವಂತೆ ಮಾಡಿತ್ತು. ಇದೀಗ ಕೊಲೆ ನಡೆದು 5 ವರ್ಷಗಳ ಬಳಿಕ ಆರೋಪಿಗಳಿಗೆ ಶಿಕ್ಷೆ ವಿಧಿಸಲಾಗಿದೆ.
ಕೊಲೆಯ ಮೂವರು ಆರೋಪಿಗಳಾದ ರಾಜೇಶ್ವರಿ ಶೆಟ್ಟಿ, ಮಗ ನವನೀತ್ ಶೆಟ್ಟಿ ಹಾಗೂ ನಿರಂಜನ್ ಭಟ್ ಗೆ ಉಡುಪಿ ಸೆಶನ್ಸ್ ನ್ಯಾಯಾಲಯ ಜೀವಿತಾವಧಿ ಶಿಕ್ಷೆವಿಧಿಸಿ ತೀರ್ಪು ನೀಡಿದೆ https://udupitimes.com/wp-admin/post.php?post=54802&action=edit