ಉಡುಪಿ: ವರ್ಗಾವಣೆಗೊಂಡ ನ್ಯಾಯಾಧೀಶರಿಗೆ ಬೀಳ್ಕೊಡುಗೆ ಸಮಾರಂಭ
ಉಡುಪಿ: ವರ್ಗಾವಣೆಗೊಂಡ ಉಡುಪಿ ನ್ಯಾಯಾಲಯದಲ್ಲಿ ಕರ್ತವ್ಯ ನಿರ್ವಹಿಸಿದ್ದ ನ್ಯಾಯಾಧೀಶರಿಗೆ ಉಡುಪಿ ವಕೀಲರ ಸಂಘದ ವತಿಯಿಂದ ಜಿಲ್ಲಾ ನ್ಯಾಯಾಲಯದ ಸಂಭಾಂಗಣದಲ್ಲಿ ಶುಕ್ರವಾರ ಬೀಳ್ಕೊಡುಗೆ ಸಮಾರಂಭವನ್ನು ನಡೆಸಲಾಯಿತು.
ಉಡುಪಿ ನ್ಯಾಯಾಲಯದಲ್ಲಿ ಕರ್ತವ್ಯ ನಿರ್ವಹಿಸಿದ್ದ ಪ್ರಧಾನ ಸಿವಿಲ್ ಹಾಗೂ ಜೆಎಮ್‌ಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶ ವಿನಾಯಕ್ ವಾಂಖಾಂಡೆ ಮತ್ತು ಹೆಚ್ಚುವರಿ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶ ಜೀತು ಆರ್.ಎಸ್ ಅವರಿಗೆ ಬೀಳ್ಕೊಡಿಗೆ ಸಮಾರಂಭ ನಡೆಯಿತು. ಕಾರ್ಯಕ್ರಮದಲ್ಲಿ ಫೋಕ್ಸೋ ನ್ಯಾಯಾಲಯದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಶ್ರೀನಿವಾಸ್ ಸುವರ್ಣ ಅಧ್ಯಕ್ಷತೆ ವಹಿಸಿದ್ದರು.ಎರಡನೇ ಹೆಚ್ಚುವರಿ ಹಿರಿಯ ಸಿವಿಲ್ ಹಾಗೂ ಹೆಚ್ಚುವರಿ ಮುಖ್ಯ ದಂಡಾಧಿಕಾರಿ ನ್ಯಾಯಾಲಯದ ನ್ಯಾಯಾಧೀಶ ಮನು ಪಟೇಲ್ ಬಿ.ವೈ, ಉಡುಪಿ ವಕೀಲರ ಸಂಘದ ಉಪಾಧ್ಯಕ್ಷ ಮಿತ್ರ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.
ಹಿರಿಯ ವಕೀಲರಾದ ಎನ್.ಕೆ.ಆಚಾರ್ಯ ಹಾಗೂ ಹೆಚ್.ರಾಘವೇಂದ್ರ ಶೆಟ್ಟಿ ಶುಭಹಾರೈಸಿದರು. ಉಡುಪಿ ವಕೀಲರ ಸಂಘದ ಅಧ್ಯಕ್ಷ ರೆನೋಲ್ಡ್ ಪ್ರವೀಣ್ ಕುಮಾರ್ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ರಾಜೇಶ್ ಎ.ಆರ್ ವಂದಿಸಿದರು. ವಕೀಲೆ ಸಹನಾ ಕುಂದರ್ ನಿರೂಪಿಸಿದರು.





