ಹೆಚ್ಚುತ್ತಿರುವ ಕೊರೊನಾ ಪ್ರಕರಣ: ನಾಳೆಯಿಂದ ಮತ್ತೆ ಕೊರೊನಾ ಟೆಸ್ಟ್ ಗೆ ಚಿಂತನೆ
ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಇದನ್ನು ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ರಾಜ್ಯಾಂದ್ಯಂತ ನಾಳೆಯಿಂದ ಕೋವಿಡ್ ಟೆಸ್ಟ್ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ರಾಜ್ಯಾದ್ಯಂತ ಈಗಾಗಲೇ 35 ಮಂದಿಗೆ ಕೊರನಾ ವೈರಸ್ ಸೋಂಕು ಇರುವುದು ದೃಢಪಟ್ಟಿರುವ ಹಿನ್ನೆಲೆ ರಾಜ್ಯದ ಮೆಡಿಕಲ್ ಕಾಲೇಜು ಆಸ್ಪತ್ರೆ, ಜಿಲ್ಲಾಸ್ಪತ್ರೆಗಳಲ್ಲಿ ಕೋವಿಡ್ ಟೆಸ್ಟ್ ಮಾಡಲು ನಿರ್ಧರಿಸಲಾಗಿದೆ. ಈ ಮೂಲಕ ಕೊರೊನಾ ವೈರಸ್ ಸೋಂಕು ರಾಜ್ಯಾದ್ಯಂತ ಹರಡುವ ಮೊದಲೇ ಅದನ್ನು ಕಂಡು ಹಿಡಿದು ಚಿಕಿತ್ಸೆ ನೀಡಲು ಚಿಂತಿಸಲಾಗಿದೆ.

ಇನ್ನು, 2019ರಂದು ಚೀನಾದಲ್ಲಿ ಜನ್ಮತಾಳಿದ ಕೊರೊನಾ ವೈರಸ್ ಎಲ್ಲೆಡೆ ಹರಡುವ ಮೂಲಕ ಜನರಲ್ಲಿ ಆತಂಕವನ್ನು ಸೃಷ್ಟಿ ಮಾಡಿತ್ತು. ಚಿಕಿತ್ಸೆ ಇಲ್ಲದ ಕೊರೊನಾ ನಿಯಂತ್ರಣಕ್ಕೆ ಲಾಕ್ ಡೌನ್ ಅನ್ನು ಕೂಡ ಮಾಡಲಾಗಿತ್ತು. ಬಳಿಕ ಕೋವಿಡ್ ಲಸಿಕೆಯನ್ನು ಕಂಡು ಹಿಡಿದು ಕೊರೊನಾವನ್ನು ನಿಯಂತ್ರಣಕ್ಕೆ ತರಲಾಯಿತು.





